ಬೆಂಗಳೂರಿನ ಮ್ಯಾಟ್ರಸ್‌ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು : (Fire accident in mattress factory) ಮ್ಯಾಟ್ರಸ್‌ ಕಾರ್ಖಾನೆಗೆ ಬೆಂಕಿ ಬಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನೆಲಮಂಗಲ ತಾಲೂಕಿನ ಟಿ. ಬೇಗೂರು ಬಳಿಯಲ್ಲಿ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಯಗಳು ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಬೆಂಗಳೂರಿನ ನೆಲಮಂಗಲದ ಟಿ ಬೇಗೂರು ಬಳಿಯಲ್ಲಿರುವ ಮ್ಯಾಟ್ರಸ್‌ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದಲ್ಲದೇ ಅಕ್ಕಪಕ್ಕದ ಇನ್ನಿತರ ಆಯಿಲ್‌ ಕಾರ್ಖಾನೆಗೂ ಬೆಂಕಿಯ ಆತಂಕ ಉಂಟಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಹೈಟೆನ್ಶನ್‌ ವೈಯರ್‌ ತುಂಡಾಗಿ ಕಾರ್ಖಾನೆ ಮೇಲೆ ಬಿದ್ದಿರುವ ಕಾರಣದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ನೆಲಮಂಗಲ ಅಗ್ನಿಶಾಮಕ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೊರಗಡೆ ಬಂದಿದ್ದು, ದೊಡ್ಡ ಅನಾಹುತ ತಪ್ಪಿಹೋಗಿದೆ. ಸದ್ಯ ಘಟನೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣಗಳು ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

https://twitter.com/NewsFirstKan/status/1642023701679079424?ref_src=twsrc%5Etfw%7Ctwcamp%5Etweetembed%7Ctwterm%5E1642023701679079424%7Ctwgr%5Ebf6986da62499172ab1223256bbe764ca72b578d%7Ctwcon%5Es1_&ref_url=https%3A%2F%2Fnewsfirstlive.com%2F2023%2F04%2F01%2Ffire-in-kurlon-factory-696857%2F

ಸಂಜಯ್‌ ಮಾರ್ಕೆಟ್‌ನಲ್ಲಿ ಬೆಂಕಿ ಅವಘಡ : ಹಲವು ಅಂಗಡಿಗಳು ಬೆಂಕಿಗಾಹುತಿ

ಪ್ರಯಾಗ್‌ ರಾಜ್:‌ ಸಂಜಯ್ ಮಾರ್ಕೆಟ್‌ನಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಸಮೀಪದಲ್ಲಿ ನಿರ್ಮಿಸಲಾಗಿದ್ದ ಹಲವು ಅಂಗಡಿಗಳಿಗೆ ಬೆಂಕಿ ತಗುಲಿದ್ದು, ಅಂಗಡಿಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಸಂಜಯ್ ಮಾರ್ಕೆಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ಇದನ್ನೂ ಓದಿ : ಸಿನಿಮಾ ರೇಟಿಂಗ್‌ ಲಿಂಕ್‌ ಕ್ಲಿಕ್‌ ಮಾಡಿ 1.12 ಕೋಟಿ ರೂ. ಕಳೆದುಕೊಂಡ ದಂಪತಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಸಂಜಯ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿರುವುದು ಕಂಡು ಬಂದಿದೆ. ಸದ್ಯ ಪ್ರಾಣಹಾನಿಯ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

Fire accident in mattress factory: A terrible fire accident in a mattress factory in Bangalore

Comments are closed.