ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : 9 ಮಂದಿ ಸಾವು, ಹಲವರಿಗೆ ಗಾಯ

ಪಶ್ವಿಮ ಬಂಗಾಳ : ಪಟಾಕಿ ಕಾರ್ಖಾನೆಯೊಂದರಲ್ಲಿ (Firecracker factory explosion) ಭಾರೀ ಸ್ಪೋಟ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇನ್ನುಳಿದಂತೆ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇನ್ನು ಮೃತ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದೆ.

ಸದ್ಯ ಈ ದುರ್ಘಟನೆಯು ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ಅವಘಡದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಅಪರಾಧ ತನಿಖಾ ಇಲಾಖೆ ಘಟನೆಯ ತನಿಖೆಯನ್ನು ಚುರುಕುಗೊಳಿಸಿದೆ. ವರದಿಗಳ ಪ್ರಕಾರ, ರಾಜ್ಯ ಸರಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ನಂತರ ಕೋಲ್ಕತ್ತಾದಿಂದ ಅಪರಾಧ ತನಿಖಾ ವಿಭಾಗದ ತಂಡವು ಮಂಗಳವಾರ ರಾತ್ರಿ 9.45ಕ್ಕೆ ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿದೆ.

ಪೂರ್ವ ಮೇದಿನಿಪುರ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ್‌ ಕೆ, ಇಲ್ಲಿಯವರೆಗೆ, 9 ಮೃತದೇಹಗಳು ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೋಲ್ಕತ್ತಾದ ಆಸ್ಪತ್ತೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಲೇಡಿ ಸಿಂಗಮ್‌ ಖ್ಯಾತಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಜುನ್ಮೋನಿ ರಭಾ ರಸ್ತೆ ಅಪಘಾತದಲ್ಲಿ ಸಾವು

ಇದನ್ನೂ ಓದಿ : 1.10 ಕೋಟಿ ಲಂಚ ಪಡೆದ ಐಎಎಸ್ ಅಧಿಕಾರಿ ಬಂಧನ : ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ

ಮಧ್ಯಾಹ್ನದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಭಾರೀ ಸ್ಫೋಟವೊಂದು ಕೇಳಿ ಬಂದಿತ್ತು. ಕಾರ್ಖಾನೆಯ ಮೇಲ್ಛಾವಣಿ ಹಾರಿ ಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿವೆ. ಕೆಲವರ ದೇಹಗಳು ರಸ್ತೆಯ್ಲಿ ಬಿದ್ದಿವೆ ಅದರಲ್ಲಿ ಹಲವರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಗಮಿಸಿದ ಪೊಲೀಸ್‌ ಆಧಿಕಾರಿಗಳ ಮಾಹಿತಿ ಪ್ರಕಾರ, ಮೃತರು ಮತ್ತು ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನುಳಿದಂತೆ ಸ್ಫೋಟ ಸಂಭವಿಸಿದ ಸ್ಥಳವು ಒಡಿಶಾದ ಗಡಿ ಪ್ರದೇಶದಲ್ಲಿ ಇರುತ್ತದೆ.

ಇದನ್ನೂ ಓದಿ : ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್‌

ಇದನ್ನೂ ಓದಿ : ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್‌

Firecracker factory explosion: Explosion in firecracker factory: 9 dead, many injured

Comments are closed.