Firecracker Factory Explosion : ಪಟಾಕಿ ಕಾರ್ಖಾನೆ ಗೋದಾಮಿನಲ್ಲಿ ಸ್ಫೋಟ 8 ಮಂದಿ ಸಾವು : ಹಲವರಿಗೆ ಗಾಯ

ತಮಿಳುನಾಡು : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರ ಗೋಡೌನ್‌ನಲ್ಲಿ (Firecracker Factory Explosion) ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕೃಷ್ಣಗಿರಿ ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೋರ್ ಪ್ರಕಾರ, ಪಜಯಪೆಟ್ಟೈ ಪ್ರದೇಶದಲ್ಲಿ ರವಿ ಎಂಬುವವರ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಬೆಂಕಿ ಅಕ್ಕಪಕ್ಕದ ಅಂಗಡಿ, ಮನೆಗಳಿಗೂ ವ್ಯಾಪಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ : Satna Rape Case : ದೇವಸ್ಥಾನದ ಬಳಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರ ಬಂಧನ

ಇದನ್ನೂ ಓದಿ : Manipur violence : ಮಣಿಪುರ ಹಿಂಸಾಚಾರ ಸಾಮೂಹಿಕ ಅತ್ಯಾಚಾರ ಪ್ರಕರಣ : ಸಿಬಿಐನಿಂದ ತನಿಖೆ ಆರಂಭ, ಎಫ್ಐಆರ್ ದಾಖಲು

“ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ ಮತ್ತು ಇತರ ಕೆಲವು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ” ಎಂದು ಠಾಕೋರ್ ಹೇಳಿದರು. ಈ ದುರ್ಘಟನೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ಠಾಕೂರ್ ನಂತರ ಹೇಳಿದ್ದಾರೆ. ಗಾಯಾಳುಗಳನ್ನು ರಕ್ಷಿಸಿದವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

Firecracker Factory Explosion: Explosion in firecracker factory warehouse 8 dead: many injured

Comments are closed.