ದೇವನಹಳ್ಳಿ : ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ (Former MLA Venkataswamy passes way) ಇಹಲೋಕವನ್ನು ತ್ಯಜಿಸಿದ್ದಾರೆ. ಶಾಸಕ ವೆಂಕಟಸ್ವಾಮಿ ಅವರಿಗೆ ತೀವ್ರ ಎದೆನೋವಿನಿಂದ ಸಾವನ್ನಪ್ಪಿದ್ದಾರೆ ಎಂದು ಆಪ್ತ ಮೂಲಗಳಿಂದ ವರದಿ ಆಗಿದೆ. ಸಾದಹಳ್ಳಿಯಲ್ಲಿರುವ ನಿವಾಸದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಶಾಸಕ ವೆಂಕಟಸ್ವಾಮಿ ತಮ್ಮ 53 ವರ್ಷದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಶಾಸಕ ವೆಂಕಟಸ್ವಾಮಿ ಅವರು ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಕಳೆದ ಮೂರು ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿದ್ದು, ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿಸಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆದರೆ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ್ದಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟಸ್ವಾಮಿ ಬೇಸರಗೊಂಡಿದ್ದರು.
ಇದನ್ನೂ ಓದಿ : Mangaluru accident : ಮಂಗಳೂರು : ಬಸ್- ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸಾವು
ಇದನ್ನೂ ಓದಿ : Land scam case : ಐಎಎಸ್ ಅಧಿಕಾರಿ ಛಾವಿ ರಂಜನ್ ವಿರುದ್ಧ ಇಡಿ ದಾಳಿ
ವೆಂಕಟಸ್ವಾಮಿ ಅವರು 2008ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಜನರ ಮೆಚ್ಚುಗೆ ಗಳಿಸಿದ್ದ ಅವರು 2013ರ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಆದರೆ ಪಕ್ಷದ ಮುಖಂಡರ ಒಳ ಜಗಳದಿಂದ ಜೆಡಿಎಸ್ ಅಭ್ಯರ್ಥಿ ಪಿಳ್ಯ ಮುನಿಶಾಮಪ್ಪ ಮುಂದೆ ಸೋಲು ಕಂಡಿದ್ದರು. ಮೊದಲ ಬಾರಿ ಸೋಲು ಕಂಡಿದ್ದ ವೆಂಕಟಸ್ವಾಮಿ ಅವರು ತೆರ ಮರೆಗೆ ಸರಿಯದೇ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ 2018ರ ಚುನಾವಣೆಯಲ್ಲಿ ಪುನಃ ಸ್ಪರ್ಧಿಸಿದ್ದರು. ಆದರೆ ಜೆಡಿಎಸ್ ಅಭ್ಯರ್ಥಿ ಎಲ್.ಎನ್ ನಾರಾಯಣ ಸ್ವಾಮಿ ವಿರುದ್ಧ ಸುಮಾರು ಹದಿನೇಳು ಸಾವಿರ ಮತಗಳ ಅಂತದಲ್ಲಿ ಸೋಲು ಕಂಡಿದ್ದರು.
ಇದನ್ನೂ ಓದಿ : ಹಾಲಾಡಿ ಶ್ರೀನಿವಾಸ್ ಶೆಟ್ಟಿ + ಕಿರಣ್ ಕೊಡ್ಗಿ : ಗೆಲುವು ಕಾಣುವರೇ ಮೊಳಹಳ್ಳಿ
Former MLA Venkataswamy passes way : Devanahalli former MLA Venkataswamy dies of heart attack