ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಗರ್ಭಿಣಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ

ಅಮರಾವತಿ : ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಪತಿ ಹಾಗೂ ಮಕ್ಕಳ ಜೊತೆಯಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಮೂವರು ಕಾಮುಕರು ಸಾಮೂಹಿಕವಾಗಿ (Gang rape pregnant woman ) ಗರ್ಭಿಣಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲಿಗಾಗಿ ಕಾಯುತ್ತಾ ಮಹಿಳೆಯು ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದಳು. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಮೂವರು ಆರೋಪಿಗಳು ಪತಿಯನ್ನು ಮನಬಂದಂತೆ ಥಳಿಸಿದ್ದಾರೆ. ನಂತರ ಗರ್ಭಿಣಿಯನ್ನು ಸಮೀಪದಲ್ಲಿರುವ ಪೊದೆಯೊಂದಕ್ಕೆ ಎಳೆದೊಯ್ದು ಆಕೆಯ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಕುಡಿದ ಮತ್ತಲ್ಲಿ ಈ ಘಟನೆ ನಡೆದಿದ್ದು, ಮೂವರು ಆರೋಪಿಗಳ ಪೈಕಿ ಓರ್ವ ಅಪ್ರಾಪ್ತನಾಗಿದ್ದಾನೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ ರೆಡ್ಡಿ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆ ವಾಸಿರೆಡ್ಡಿ ಪದ್ಮಾ ಅವರು ಅತ್ಯಾಚಾರಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಇನ್ನು ಇದೇ ರೈಲ್ವೇ ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಒಂದೇ ದಿನದಲ್ಲಿ ಎರಡು ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಶರಣಾಗತಿ

ಇದನ್ನೂ ಓದಿ : ಶವರ್ಮ ತಿಂದು ವಿದ್ಯಾರ್ಥಿನಿ ಸಾವು, 18 ಮಂದಿ ಅಸ್ವಸ್ಥ

Gang rape pregnant woman on a railway platform

Comments are closed.