Gas pipeline explosion: ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ: ಇಬ್ಬರಿಗೆ ಗಾಯ

ಬೆಂಗಳೂರು : (Gas pipeline explosion) ಬಿಬಿಎಂಪಿ ಡ್ರೈನೇಜ್‌ ಕಾಮಗಾರಿಯ ವೇಳೆ ಮನೆಯೊಳಗಿದ್ದ ಎರಡು ಸಿಲಿಂಡರ್‌ ಗಳು ಏಕಾಏಕಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರಯು ಗಾಯಗೊಂಡಿರುವ ಘಟನೆ ನಡೆದಿದೆ. ಎಚ್‌. ಎಸ್‌, ಆರ್‌ ಲೇಔಟ್‌ ಮದೀನಾ ಮಸೀದಿ ಬಳಿ ಈ ಘಟನೆ ನಡೆದಿದ್ದು, ಜಮೀರ್‌ ಅಹಮದ್‌ ಎನ್ನುವವರಿಗೆ ಸೇರಿದ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅಂಜುಮ್‌ ಹಾಗೂ ಮುಬಾಸಿರಾ ಎನ್ನುವ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ಈ ಇಬ್ಬರು ಮಹಿಳೆಯರು ಅಡುಗೆ ಮಾಡಲು ಅಡುಗೆ ಕೋಣೆಗೆ ಹೋದಾಗ ಏಕಾಏಕಿ ಸ್ಫೋಟ ಸಂಭವಿಸಿದೆ. ಸಫೋಟದ ತೀವ್ರತೆಗೆ ಮನೆಯೊಳಗಿದ್ದ ಕೆಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಗಾಯಗೊಂಡ ಮಹಿಳೆಯರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಇದೀಗ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಮೀರ್‌ ಅಹಮದ್‌ ಅವರಿಗೆ ಸೇರಿದ ಮನೆಯ ಮುಂದೆ ಬಿಬಿಎಂಪಿ ಇಂದ ಡ್ರೈನೇಜ್‌ ಕಾಮಗಾರಿ ನಡೆಯುತ್ತಿದ್ದು, ಅದೇ ಜಾಗದಲ್ಲಿ ಅಳವಡಿಸಲಾಗಿದ್ದ ಗೇಲ್‌ ಗ್ಯಾಸ್‌ ಪೈಪ್‌ ಲೈನ್‌ ಗೆ ಹಾನಿಯಾದ ಹಿನ್ನಲೆಯಲ್ಲಿ ಮನೆಯೊಳಗೆ ಗ್ಯಾಸ್‌ ಲೀಕ್‌ ಆಗಿ ಸ್ಪೋಟ ಸಂಭವಿಸಿದೆ. ಇನ್ನೂ ಈ ಘಟನೆಗೆ ಗೇಲ್‌ ಗ್ಯಾಸ್‌ ಕಂಪನಿಯ ನಿರ್ಲಕ್ಷ್ಯತನವೇ ಎಂದು ಆರೋಪಿಸಲಾಗುತ್ತಿದೆ. ಈ ಭಾಗದಲ್ಲಿ ಗೇಲ್‌ ಪೈಪ್‌ ಲೈನ್‌ ಹಾದು ಹೋಗಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತಂದಿಲ್ಲ ಎಂದು ಆರೋಪಿಸಲಾಗುತ್ತಿದ್ದು, ಇವರ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : Court imposed death penalty: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಘಾಜಿಯಾಬಾದ್ : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ನಂತರ ಕೊಲೆ ಮಾಡಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ‘‘ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಘಾಜಿಯಾಬಾದ್ ಪೋಕ್ಸೋ ನ್ಯಾಯಾಲಯ ಶಿಕ್ಷೆಯನ್ನು ಪ್ರಕಟಿಸಿದೆ. ಸುಮಾರು 6 ತಿಂಗಳ ನಂತರ, ನ್ಯಾಯಾಲಯವು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302, 363 ಮತ್ತು 376 ರ ಅಡಿಯಲ್ಲಿ ಶಿಕ್ಷೆ ವಿಧಿಸಿದೆ, ”ಎಂದು ಘಾಜಿಯಾಬಾದ್ ಗ್ರಾಮಾಂತರ ಡಿಸಿಪಿ ರವಿಕುಮಾರ್ ಹೇಳಿದರು. ಈ ಘಟನೆಯು ಆಗಸ್ಟ್ 18, 2022 ರಂದು ನಡೆದಿದ್ದು, ಮೋದಿನಗರ ಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ತನಿಖೆಯ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ : Dead body in plastic bag: ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯ ಕೊಳೆತ ಶವ ಪತ್ತೆ : ಮಗಳು ಪೊಲೀಸರ ವಶಕ್ಕೆ

ಇದನ್ನೂ ಓದಿ : Aligarh Crime: ಸಾರ್ವಜನಿಕ ಪ್ರದೇಶದಲ್ಲಿ ಅನುಚಿತವಾಗಿ ಡ್ರೆಸ್ಸಿಂಗ್ ಮಾಡಿ ಓಡಾಡುತ್ತಿದ್ದ ಪತ್ನಿಯನ್ನು ಕೊಂದೆ ಬಿಟ್ಟ ಪತಿರಾಯ

Gas pipeline explosion: Gas pipeline explosion in Bangalore: Two injured

Comments are closed.