Hair transplant: ಕೂದಲು ಕಸಿ ಮಾಡಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ

ನವದೆಹಲಿ: (Hair transplant) ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಕೂದಲು ಕಸಿ ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲು ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ದೆಹಲಿಯ ಅಥರ್ ರಶೀದ್ (30 ವರ್ಷ) ಅವರು ಕೂದಲು ಕಸಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಅಥರ್ ರಶೀದ್ ಎನ್ನುವ ವ್ಯಕ್ತಿ ಕೂದಲ ಕಸಿ (Hair transplant) ಮಾಡಿಸಿಕೊಳ್ಳಲು ದೆಹಲಿಯ ಒಂದು ಕ್ಲಿನಿಕ್‌ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ. ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕೂದಲ ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಮಗ ತುಂಬಾ ನೋವಿನಿಂದ ಬಳಲುತ್ತಿದ್ದ ಆತನ ಮೈಮೇಲೆ ಗುಳ್ಳೆಗಳಾಗಿದ್ದವು ಎಂದು ರಶೀದ್ ತಾಯಿ ಆಸಿಯಾ ಬೇಗಂ ತಿಳಿಸಿದ್ದಾರೆ.

ಘಟನೆಯ ಬಳಿಕ ರಶೀದ್ ಕುಟುಂಬದ ಸದಸ್ಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ಇಬ್ಬರು ವೈದ್ಯರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : Student Mysterious murder: ಮೂರನೇ ತರಗತಿ ವಿದ್ಯಾರ್ಥಿನಿಯ ನಿಗೂಢ ಹತ್ಯೆ: ಓರ್ವ ಅರೆಸ್ಟ್

ಇದನ್ನೂ ಓದಿ : Wall writing: ಶಿವಮೊಗ್ಗದಲ್ಲಿ ವಿವಾದಾತ್ಮಕ ಗೋಡೆಬರಹ ಪತ್ತೆ

ಇದನ್ನೂ ಓದಿ : Current shock: ಪಾರಿವಾಳ ಹಿಡಿಯಲು ಹೋದವರಿಗೆ ಕರೆಂಟ್‌ ಶಾಕ್‌: ಬಾಲಕ ಸಾವು

ಇದನ್ನೂ ಓದಿ : Murder mystery: ಸೊಸೆಯ ಮೇಲೆ ಕಣ್ಣು ಹಾಕಿದ್ದ ಮಾವ ಹೆಣವಾದ; ಸುಪಾರಿ ಕೊಟ್ಟು ಬೀಗರಿಂದಲೇ ಮರ್ಡರ್..!

Nowadays most people are leaning towards hair transplant. But a shocking incident happened in Delhi where a person who went for hair transplant lost his life due to the doctor’s negligence. Athar Rashid (30 years old) from Delhi lost his life after going for hair transplant.

Comments are closed.