ಭಾನುವಾರ, ಏಪ್ರಿಲ್ 27, 2025
HomeCoastal NewsUdupi : ಪ್ರೇಯಸಿಗೆ ಚೂರಿ ಇರಿದು, ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

Udupi : ಪ್ರೇಯಸಿಗೆ ಚೂರಿ ಇರಿದು, ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

- Advertisement -

ಉಡುಪಿ : ಪ್ರೇಯಸಿಗೆ ಚಾಕುವಿನಿಂದ ಇರಿದು ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೈಕಿನಲ್ಲಿ ಬಂದಿದ್ದ ಯುವ ಜೋಡಿ ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಜಾರಿ

ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನೂ ಕೂಡ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಾಕು ಪತ್ತೆಯಾಗಿದೆ.

ಇದನ್ನೂ ಓದಿ: School Reopen : ಸಪ್ಟೆಂಬರ್‌ 6 ರಿಂದ 6 – 8 ತರಗತಿಗಳು ಆರಂಭ

RELATED ARTICLES

Most Popular