ಬುಧವಾರ, ಏಪ್ರಿಲ್ 30, 2025
HomeCrimeಸಿಲಿಕಾನ್‌ ಸಿಟಿಯಲ್ಲಿ ವರುಣ ಆರ್ಭಟಕ್ಕೆ ಮತ್ತೊಂದು ಬಲಿ

ಸಿಲಿಕಾನ್‌ ಸಿಟಿಯಲ್ಲಿ ವರುಣ ಆರ್ಭಟಕ್ಕೆ ಮತ್ತೊಂದು ಬಲಿ

- Advertisement -

ಬೆಂಗಳೂರು : ಬೆಂಗಳೂರು ನಗರದಲ್ಲಿ (Heavy rainfall in Bangalore) ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಆಗಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್‌ ಸಿಟಿಯಲ್ಲಿ ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾನೆ ಎಂದು ವರದಿ ಆಗಿದೆ. ಇನ್ನೊಂದು ಕಡೆ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದ್ದರಿಂದ ಕಾರೊಂದು ಸಿಕ್ಕಿ ಬಿದ್ದಿದ್ದು, ಓರ್ವ ಯುವತಿ ಮೃತ ಪಟ್ಟಿದ್ದಾಳೆ. ಅದೇ ಕಾರಿನಲ್ಲಿ ಉಳಿದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ.

ಮೃತ ಯುವಕ ಲೋಕೇಶ್‌ (27 ವರ್ಷ) ಎಂದು ಗುರುತಿಸಲಾಗಿದೆ. ಜೋರಾಗಿ ಬಂದ ಮಳೆಯಿಂದಾಗಿ ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಲೋಕೇಶ್‌ನ ಮೃತದೇಹ ಇಂದು ಬ್ಯಾಟರಾಯನಪೂರದ ರಾಜಕಾಲುವೆ ಬಳಿ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ಪ್ರಯಾಣಿಕರಿಗಾಗಿ 1 ಕಿ.ಮೀ. ಹಿಮ್ಮುಖ ಚಲಿಸಿದ ರೈಲು

ಕಳೆದ ಒಂದಷ್ಟು ದಿನದಿಂದ ರಾಜ್ಯದ ರಾಜಧಾನಿಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಆಲಿಕಲ್ಲು ಮಳೆ ಸಂಭವಿಸಿದೆ. ಇದ್ದರಿಂದಾಗಿ ಜನರ ಜೀವನ ಅಸ್ಥವ್ಯಸ್ಥಗೊಂಡಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆ ಕಂಡಿದೆ. ಅವೈಜ್ವಾನಿಕ ರಾಜಕಾಲುವೆ ಕಾಮಗಾರಿಯಿಂದ ಕೊಚ್ಚಿ ಹೋಗಿರುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಕೆಪಿ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ರಾಜಧಾನಿಯಲ್ಲಿ ವರುಣನ ಆರ್ಭಟ : ಕಾರು ಮುಳುಗಿ ಯುವತಿ ಸಾವು, ನಾಲ್ವರ ರಕ್ಷಣೆ

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಸತತವಾಗಿ ಸುರಿಯುತ್ತಿರುವ ವರುಣನ ಆರ್ಭಟದಿಂದಾಗಿ (Heavy rainfall in Bengaluru) ಜನ ಹಾಗೂ ವಾಹನ ಸಂಚಾರಕ್ಕೆ ತೊಡಕಾಗಿದೆ. ಅದ್ರಲ್ಲೂ ಸಿಲಿಕಾನ್‌ ಸಿಟಿಯಲ್ಲಿ ಸತತವಾಗಿ ಸುರಿದ ಮಳೆಗೆ ಕಾರೊಂದು ಮುಳುಗಿದ ಪರಿಣಾಮವಾಗಿ, 22 ವರ್ಷದ ಯುವತಿ ಮೃತ ಪಟ್ಟಿದ್ದು, ಮತ್ತೆ ಉಳಿದ ನಾಲ್ವರನ್ನು ರಕ್ಷಣೆಪಡೆ ರಕ್ಷಿಸಿದೆ.

ಮೃತ ಯುವತಿಯನ್ನು ವಿಜಯವಾಡ ಮೂಲದ ಭಾನುರೇಖಾ ಎಂದು ಗುರುತಿಸಲಾಗಿದೆ. ಭಾರೀ ಮಳೆಗೆ ಬೆಂಗಳರಿನ ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ನಲ್ಲಿ ನೀರು ಶೇಖರಣೆಯಾಗಿದ್ದು, ಇದರಲ್ಲಿ ಕಾರು ಮುಳುಗಡೆಯಾಗಿದೆ. ಕಾರಿನಲ್ಲಿದ್ದ ಇತರರನ್ನು ರಕ್ಷಣೆ ಮಾಡಲಾಗಿದ್ದು, ಯುವತಿ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮೃತ ಯುವತಿ ಮನೆಯವರಿಗೆ ಸಂತಾಪವನ್ನು ಸೂಚಿಸಿದ್ದಾರೆ. ಉಳಿದ ನಾಲ್ವರ ಬಗ್ಗೆ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದರಿಂದ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ.

Heavy rainfall in Bangalore: Another victim of Varuna riots in Silicon City

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular