ಹೆಬ್ರಿ ಸೋಮೇಶ್ವರ ಬಳಿ ಭೀಕರ ಅಪಘಾತ : ದೈಹಿಕ ಶಿಕ್ಷಕ ಸೇರಿ ಇಬ್ಬರು ಸಾವು, ಇಬ್ಬರು ಗಂಭೀರ

ಹೆಬ್ರಿ : Hebri Someshwara Accident: ಸ್ನೇಹಿತನ ಮದುವೆ ಮುಗಿಸಿ ಕಾರಿನಲ್ಲಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಕಾರಿಗೆ ಖಾಸಗಿ ಬಸ್‌ ಢಿಕ್ಕಿಯಾಗಿ ದೈಹಿಕ ಶಿಕ್ಷಕ ಸೇರಿದಂತೆ ಇಬ್ಬರು ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ 169 ಎ ಯ ಸೋಮೇಶ್ವರದ ಸೀತಾನದಿಯ ಬಳಿಯಲ್ಲಿ ನಡೆದಿದೆ.

ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷ ಅಲೆವೂರು ನಿವಾಸಿ ಸೋಮಶೇಖರ್‌ ಹಾಗೂ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ ಎಂದು ಗುರುತಿಸಲಾಗಿದೆ. ಆರಿನಲ್ಲಿದ್ದ ಸತೀಶ್‌ ಹಾಗೂ ಸುದರ್ಶನ್‌ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

#image_title

ದಾವಣಗೆರೆಯ ಚೆನ್ನಗಿರಿಯಲ್ಲಿ ನಡೆದ ತನ್ನ ಸ್ನೇಹಿತನ ಮದುವೆಯನ್ನು ಮುಗಿಸಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಉಡುಪಿಯಿಂದ ಆಗುಂಬೆಯ ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಸುಬ್ಬಣ್ಣ ಗಾಣಿಗ ಹಾಗೂ ಸೋಮಶೇಖರ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹೆಬ್ರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯ ವರ್ತನೆ : ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

ಇದನ್ನೂ ಓದಿ : ಪ್ರೇಯಸಿಯನ್ನು ಕೊಲೆಗೈದು ಚರಂಡಿಗೆ ಎಸೆದ ಅರ್ಚಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕೃಷ್ಣ (58 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರು ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಲಕೃಷ್ಣ ಹಲವು ವರ್ಷಗಳಿಂದಲೂ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನ ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯಲ್ಲಿರುವ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದರು. ಮನೆಯ ಮಹಡಿಗೆ ತೆರಳಿದ್ದ ಬಾಲಕೃಷ್ಣ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕೃಷ್ಣ ಅವರು ಈ ಹಿಂದೆ ಆರೋಗ್ಯ ಇಲಾಖೆಯ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಹಲವು ವರ್ಷಗಳಿಂದಲೂ ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಬಾಲಕೃಷ್ಣ ಅವರ ಪುತ್ರ ಕಾವೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಇನ್ನು ಉಡುಪಿಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೇಹಳ್ಳಿ ಗ್ರಾಮದ ಉದ್ದಲಗುಡ್ಡೆಯ ದುರ್ಗಾ ಎಂಬಲ್ಲಿ ನಡೆದಿದೆ. ಪೂಜಾ ಪಿ ಶೆಟ್ಟಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಹಲವು ವರ್ಷಗಳಿಂದಲೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತನ್ನ ತಂದೆಯೊಂದಿಗೆ ವಾಸವಾಗಿದ್ದರು. ಮುಂಜಾನೆಯ ವೇಳೆಯಲ್ಲಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ತಂದೆ ಕರುಣಾಕರ ಹೆಗ್ಡೆ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hebri Someshwara Car Private Bus Accident 2 teacher death 2 serious

Comments are closed.