ಬುಧವಾರ, ಏಪ್ರಿಲ್ 30, 2025
HomeCrimeHoliday for college: ಕನ್ನಡ ಬಾವುಟ ಹಿಡಿದಿದ್ದಕ್ಕೆ ಹಲ್ಲೆ: ಮುಂಜಾಗ್ರತಾ ಕ್ರಮವಾಗಿ ಕಾಲೇಜಿಗೆ ರಜೆ ಘೋಷಣೆ

Holiday for college: ಕನ್ನಡ ಬಾವುಟ ಹಿಡಿದಿದ್ದಕ್ಕೆ ಹಲ್ಲೆ: ಮುಂಜಾಗ್ರತಾ ಕ್ರಮವಾಗಿ ಕಾಲೇಜಿಗೆ ರಜೆ ಘೋಷಣೆ

- Advertisement -

ಬೆಳಗಾವಿ: (Holiday for college) ಕನ್ನಡ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿಯ ಮೇಲೆ ಮರಾಠಿ ಭಾಷೆ ಮಾತನಾಡುವ ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿತ್ತು. ಈ ಕುರಿತು ಟಿಳಕವಾಡಿಯ ಗೋಗಟೆ ಕಾಲೇಜಿಗೆ‌ ಮುತ್ತಿಗೆ ಹಾಕಲು ಕರುನಾಡ ವಿಜಯ ಸೇನೆ ಕಾರ್ಯಕರ್ತರು ನಿರ್ಧರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕನ್ನಡ ಬಾವುಟ ಹಿಡಿದು ಡ್ಯಾನ್ಸ್‌ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಕೆಲ ಪುಂಡ ವಿದ್ಯಾರ್ಥಿಗಳು ಏಕಾಏಕಿ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಇದರ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದು, ಇಂದು ಈ ಪ್ರಕರಣದ ಕುರಿತು ಟಿಳಕವಾಡಿಯ ಗೋಗಟೆ ಕಾಲೇಜಿಗೆ‌ ಮುತ್ತಿಗೆ ಹಾಕಲು ಕರುನಾಡ ವಿಜಯ ಸೇನೆ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಘಟನೆಯಲ್ಲಿ ಯಾವುದೇ ತೊಂದರೆ ಆಗದ ರೀತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಟಿಳಕವಾಡಿಯ ಗೋಗಟೆ ಕಾಲೇಜಿಗೆ ರಜೆ ಘೋಷಣೆ (Holiday for college) ಮಾಡಲಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯುತ್ತಿದೆ. ಟಯರ್‌ ಗೆ ಬೆಂಕಿ ಹಚ್ಚುವ ಮೂಲಕ ಹಿಂದೂ ಪರ ಸಂಘಟನೆಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನೂ ಈ ಪ್ರಕರಣದ ಕುರಿತು ಹಲ್ಲೆಗೊಳಗಾದ ವಿದ್ಯಾರ್ಥಿ ಪ್ರತಿಕ್ರಿಯೆ ನೀಡಿದ್ದು, ” ಬಾವುಟ ಹಿಡಿದು ಡ್ಯಾನ್ಸ್‌ ಮಾಡುವಾಗ ಹಲ್ಲೆ ನಡೆಸಿದ್ದಾರೆ. ದೂರು ಕೊಡಲು ಠಾಣೆಗೆ ಹೋದಾಗಲು ಡಿಸಿಪಿ ಅವರು ಅವಾಚ್ಯ ಶಬ್ಧಗಳಿಂದ ನಿಂಧಿಸಿದ್ದಾರೆ. ದೂರು ದಾಖಲಿಸಿಕೊಳ್ಳದೇ ಅಲ್ಲಿಯೂ ಕೂಡ ಹಲ್ಲೆ ನಡೆಸಿದ್ದಾರೆ. ನಂತರದಲ್ಲಿ ಹಲ್ಲೆ ನಡೆಸಿದವರು ಕರೆ ಮಾಡಿ ಅವಹೇಳನಕಾರಿಯಾಗಿ ಬೈದಿದ್ದಾರೆ.” ಎಂದು ವರದಿ ಮಾಧ್ಯಮದೊಂದಿಗೆ ವಿದ್ಯಾರ್ಥಿ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ : Assault by students: ಕನ್ನಡ ಬಾವುಟ‌ ಹಿಡಿದು ಕುಣಿದ ವಿದ್ಯಾರ್ಥಿಗೆ ಥಳಿತ : ಕಠಿಣ ಕ್ರಮಕ್ಕೆ ಕನ್ನಡ ಪರ ಸಂಘಟನೆಗಳ ಆಗ್ರಹ

ಇದನ್ನೂ ಓದಿ : Muslim Girls College: ರಾಜ್ಯದಲ್ಲಿ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಚರ್ಚೆಯೇ ನಡೆದಿಲ್ಲ; ಸಿಎಂ ಸ್ಪಷ್ಟನೆ

ಈ ಪ್ರಕರಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ ಕರುನಾಡ ವಿಜಯ ಸೇನೆ ಅಧ್ಯಕ್ಷ ಸಂಪತ್‌ ಕುಮಾರ್‌ ಅಶ್ಲೀಲ ಪದ ಬಳಸಿ ನಿಂಧಿಸಿದ ಪೊಲೀಸರು ವಿದ್ಯಾರ್ಥಿಯ ಬಳಿ ಕ್ಷಮೆಯಾಚಿಸಬೇಕು ಎಂದಿದ್ದಾರೆ.

(Holiday for college) A student holding a Kannada flag was attacked by Marathi speaking students. Karunada Vijaya Sena activists have decided to lay siege to Gogate College in Tilakavadi and as a precautionary measure, a holiday has been declared for the college.

RELATED ARTICLES

Most Popular