ಸೋಮವಾರ, ಏಪ್ರಿಲ್ 28, 2025
HomeCrimeಶಾಸಕರೊಬ್ಬರ ಮರ್ಸಿಡಿಸ್ ಕಾರಿನಲ್ಲಿ ಬಾಲಕಿಯ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ

ಶಾಸಕರೊಬ್ಬರ ಮರ್ಸಿಡಿಸ್ ಕಾರಿನಲ್ಲಿ ಬಾಲಕಿಯ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ

- Advertisement -

ಹೊಸದಿಲ್ಲಿ: ಮರ್ಸಿಡಿಸ್‌ ಕಾರಿನಲ್ಲಿ(Mercedes car ) ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಬಾಲಕರ ಗುಂಪೊಂದು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ (Hyderabad Gang Raped) ಘಟನೆ ಹೈದ್ರಾಬಾದ್‌ ನ ಐಷಾರಾಮಿ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ಪ್ರಭಾವಿ ರಾಜಕಾರಣಿಯೋರ್ವರ ಕುಟುಂಬಕ್ಕೆ ಸೇರಿದವರು ಎನ್ನಲಾಗುತ್ತಿದೆ. ಅಲ್ಲದೇ ಅತ್ಯಾಚಾರಕ್ಕೆ ಬಳಸಿದ ಕಾರು ಶಾಸಕರೊಬ್ಬರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ರಾಜಕೀಯವಾಗಿ ಪ್ರಭಾವಿ ಕುಟುಂಬಗಳಿಗೆ ಸೇರಿದ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಘಟನೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಶಾಸಕನ ಮಗನೂ ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗುತ್ತಿದೆ. ಆದರೆ, ಸಾಮೂಹಿಕ ಅತ್ಯಾಚಾರಕ್ಕೂ ಮುನ್ನ ಆತ ಕಾರಿನಿಂದ ಇಳಿದು ಓಡಿ ಹೋಗಿದ್ದ ಕಾರಣ ಆತ ಅಪರಾಧದಲ್ಲಿ ಭಾಗಿಯಾಗದೇ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ತನ್ನ ಸ್ನೇಹಿತನೊಂದಿಗೆ ಪಬ್‌ಗೆ ಹೋಗಿದ್ದಳು. ಆದರೆ ಆಕೆಯ ಸ್ನೇಹಿತ ಬೇಗ ಹೊರಟು ಹೋಗಿದ್ದ. ಪಾರ್ಟಿಯ ಸಮಯದಲ್ಲಿ ಅವಳು ಇತರ ಹುಡುಗನೊಂದಿಗೆ ಸ್ನೇಹ ಬೆಳೆಸಿದಳು. ಅವನು ತನ್ನ ಸ್ನೇಹಿತರೊಂದಿಗೆ ಅವಳನ್ನು ಡ್ರಾಪ್‌ ಕೊಡುವುದಾಗಿ ತಿಳಿಸಿದ್ದಾನೆ. ಇದನ್ನು ನಂಬಿದ ಯುವತಿ ಬಾಲಕರಿದ್ದ ಕಾರು ಏರಿದ್ದಾಳೆ. ಆದರೆ ದಾರಿ ಮಧ್ಯದಲ್ಲಿ ಪೇಸ್ಟ್ರಿ ಅಂಗಡಿಯಲ್ಲಿ ನಿಲ್ಲಿಸಿದರು. ಜೂಬಿಲಿ ಹಿಲ್ಸ್‌ನಲ್ಲಿ ಮರ್ಸಿಡಿಸ್ ಕಾರನ್ನು ನಿಲ್ಲಿಸಿದರು, ಅಲ್ಲಿ ಐವರು ಹುಡುಗರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಉಳಿದವರು ಕಾರಿನ ಹೊರಗೆ ಕಾವಲು ಕಾಯುತ್ತಾ ನಿಂತಿದ್ದರು.

ಬಾಲಕಿ ಮನಗೆ ಮರಳಿದ ನಂತರದಲ್ಲಿ ಆಕೆಯ ಕುತ್ತಿಗೆಯಲ್ಲಿ ಗಾಯಗಳಾಗಿರುವುದನ್ನು ಗಮಿಸಿದ ಬಾಲಕಿಯ ತಂಡ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಅಲ್ಲದೇ ಬಾಲಕಿ ಆರಂಭದಲ್ಲಿ ಪಾರ್ಟಿಯಲ್ಲಿ ಹುಡುಗರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಳು. ನಂತರದಲ್ಲಿ ಘಟನೆಯ ವಿಚಾರವನ್ನು ತಂದೆಯ ಬಳಿಯಲ್ಲಿ ಹೇಳಿಕೊಂಡಿದ್ದಾಳೆ.

ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಬುಧವಾರ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಕ್ಕಳ ಲೈಂಗಿಕ ಅಪರಾಧಗಳಿಂದ (ಪೋಕ್ಸೊ) ಕಾಯ್ದೆಯ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಾರೆ. ಅಲ್ಲದೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನು ಓದಿ : Singer KK dies : ಹಾಡುತ್ತಿರುವಾಗಲೇ ಸಾವನ್ನಪ್ಪಿದ ಖ್ಯಾತ ಗಾಯಕ ಕೃಷ್ಣಕುಮಾರ್ ಕುಂನಾತ್

ಇದನ್ನೂ ಓದಿ : Prashath : ಹಾಸನದಲ್ಲಿ ಡಾ.ರಾಜ್ ಅಭಿಮಾನಿ ಕುಟುಂಬದ ಸದಸ್ಯನ ಬರ್ಬರ ಹತ್ಯೆ: ಪ್ರತಿಕಾರಕ್ಕಾಗಿ ನಡೆಯಿತಾ ಪ್ರಶಾಂತ್ ಹತ್ಯೆ

Hyderabad Gang Raped in Mercedes car

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular