mahantesh patil on cid coustody : ಪಿಎಸ್​ಐ ನೇಮಕಾತಿ ಅಕ್ರಮ : ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷನ ಬಂಧನ

ಕಲಬುರಗಿ : mahantesh patil on cid coustody: 542 ಪಿಎಸ್​ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ತಿದೆ. ಪಿಎಸ್​ಐ ಅಕ್ರಮದ ಬಗ್ಗೆ ಕಾಂಗ್ರೆಸ್​ ನಾಯಕರು ಧ್ವನಿ ಎತ್ತಿದ್ದರು. ಆದರೆ ಇದೀಗ ವಿಪರ್ಯಾಸ ಎಂಬಂತೆ ಕಾಂಗ್ರೆಸ್​ ನಾಯಕರೇ ಈ ಪ್ರಕರಣದಲ್ಲಿ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲುತ್ತಿದ್ದಾರೆ. ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ಆರೋಪಿಯಾಗಿರುವ ರುದ್ರೇಗೌಡ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆತನ ಸಹೋದರ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಮಹಂತೇಶ್​ ಎಂಬವರನ್ನು ಸಿಐಡಿ ಅಧಿಕಾರಿಗಳು ಕುತ್ತಿಗೆ ಪಟ್ಟಿ ಹಿಡಿದು ಎಳೆ ತಂದಿದ್ದಾರೆ .


ಮಹಂತೇಶ್ ಸೇರಿದಂತೆ ವಿವಿಧ ಸ್ಥಳೀಯ ಕೈ ನಾಯಕರು ನಾಳೆ ಅಫಜಲಪುರದಲ್ಲಿ 61 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ನಡೆಸುವ ತಯಾರಿಯಲ್ಲಿದ್ದರು. ಈ ಕಾರ್ಯಕ್ರಮ ದ ಸಿದ್ಧತೆ ನೋಡಿಕೊಳ್ಳುತ್ತಿದ್ದ ವೇಳೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಮಹಂತೇಶರನ್ನು ಬಂಧಿಸಿದ್ದಾರೆ.

ಅಜ್ಞಾತ ಸ್ಥಳದಲ್ಲಿರುವ ರುದ್ರೇಗೌಡ ಪಾಟೀಲ್​​ ಸಹೋದರನ ಬಂಧನದ ಬಗ್ಗೆ ಕೇಳುತ್ತಿದ್ದಂತೆಯೇ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ನನ್ನ ಸಹೋದರನನ್ನೇ ಬಂಧಿಸುತ್ತೀರಾ..? ನಿಮ್ಮನ್ನು ನೋಡಿಕೊಳ್ತೇನೆ ಎಂದು ಆವಾಜ್​ ಹಾಕಿದ್ದಾನೆ ಎನ್ನಲಾಗಿದೆ.

ಇನ್ನು ಈ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ಈ ಹಗರಣವನ್ನು ಮೊದಲು ಬಯಲಿಗೆಳೆದಿದ್ದು ಕಾಂಗ್ರೆಸ್​, ಪ್ರಿಯಾಂಕ್​ ಖರ್ಗೆ 52 ಸಾವಿರ ಮಂದಿ ಪಿಎಸ್​ಐ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗಾದ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದರು. ಬಿಜೆಪಿ ಸರ್ಕಾರ ಎಲ್ಲಾ ರೀತಿಯಿಂದಲೂ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : basanagowda patil yatnal : ಗೃಹ ಸಚಿವ ಜ್ಞಾನೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ ಶಾಸಕ ಯತ್ನಾಳ್​

ಇದನ್ನೂ ಓದಿ : Yash : ಅಭಿಮಾನಿಗಳಿಗೆ ರಾಕಿಂಗ್ ಸ್ಟಾರ್ ಕೃತಜ್ಞತೆ : ಪುಟ್ಟ ಕತೆ ಜೊತೆ ಥ್ಯಾಂಕ್ಸ್ ಎಂದ ಯಶ್

illegal case in appointment of 545 psi rudragowda patil brother mahantesh patil on cid custody

Comments are closed.