Illegal stay- 18 Arrest: ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ತಂಗಿದ್ದ 18 ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಥಾಣೆ: (Illegal stay- 18 Arrest) ಯಾವುದೇ ಪುರಾವೆಗಳಿಲ್ಲದೇ ದೇಶದಲ್ಲಿ ಅಕ್ರಮವಾಗಿ ತಂಗಿದ್ದ 18 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿ ಪಡೆದ ಮಹಾರಾಷ್ಟ್ರ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯಿಂದ 10 ಮಹಿಳೆಯರು ಸೇರಿದಂತೆ 18 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.

ನವಿ ಮುಂಬೈನ ಘನ್ಸೋಲಿ ಪ್ರದೇಶದಲ್ಲಿನ ಕಟ್ಟಡವೊಂದರಲ್ಲಿ ಕೆಲವು ಬಾಂಗ್ಲಾದೇಶಿ ಪ್ರಜೆಗಳು ತಂಗಿದ್ದು, ಅವರಲ್ಲಿ ಒಬ್ಬರ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಸೇರಿದ್ದಾರೆ ಎನ್ನುವುದರ ಸುಳಿವು ಪೊಲೀಸರಿಗೆ ಸಿಕ್ಕಿತ್ತು. ಈ ಸುಳಿವಿನ ಮೇಲೆ ಕಾರ್ಯನಿರ್ವಹಿಸಿದ ನವಿ ಮುಂಬೈನ ಪೊಲೀಸರು ಕಟ್ಟಡದ ಮೇಲೆ ದಾಳಿ ನಡೆಸಿದ್ದಾರೆ. ವೀಸಾ ಮತ್ತು ಪಾಸ್‌ಪೋರ್ಟ್‌ನಂತಹ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಕಳೆದ ಒಂದು ವರ್ಷದಿಂದ ಈ ಪ್ರದೇಶದಲ್ಲಿ ನೆಲೆಸಿರುವುದು ದಾಳಿಯ ವೇಳೆ ತಿಳಿದುಬಂದಿದೆ. ಹೀಗಾಗಿ ಅಕ್ರಮವಾಗಿ ವಾಸಿಸುತ್ತಿದ್ದ ಹತ್ತು ಮಹಿಳೆಯರು ಮತ್ತು ಎಂಟು ಪುರುಷರನ್ನು ಕಾರ್ಯಾಚರಣೆಯ ಸಮಯದಲ್ಲಿ ಬಂಧಿಸಲಾಗಿದೆ

“ನವಿ ಮುಂಬೈನ ಘನ್ಸೋಲಿ ಪ್ರದೇಶದಲ್ಲಿನ ಕಟ್ಟಡವೊಂದರಲ್ಲಿ ಕೆಲವು ಬಾಂಗ್ಲಾದೇಶಿ ಪ್ರಜೆಗಳು ಅವರಲ್ಲಿ ಒಬ್ಬರ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಸೇರುತ್ತಾರೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಅದರ ಮೇಲೆ ಕಾರ್ಯನಿರ್ವಹಿಸಿದ ನವಿ ನಂಬೈ ಪೊಲೀಸ್‌ನ ಅಪರಾಧ ವಿಭಾಗದ ಅಧಿಕಾರಿಗಳು ರಾತ್ರಿ ಆವರಣದ ಮೇಲೆ ದಾಳಿ ನಡೆಸಿದರು. ,” ಎಂದು ರಬಳೆ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದೀಗ 18 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದು, ಅವರ ವಿರುದ್ದ ವಿದೇಶಿಯರ ಕಾಯಿದೆ 1946 ಮತ್ತು ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ನಿಯಮಗಳು 1950 ರ ಅಡಿಯಲ್ಲಿ ಅವರ ವಿರುದ್ಧ ಅಪರಾಧವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Applications for Kailasa e-citizenship: ಕೈಲಾಸ ಇ- ನಾಗರೀಕತ್ವಕ್ಕೆ ಅರ್ಜಿ ಆಹ್ವಾನಿಸಿದ ನಿತ್ಯಾನಂದ

ಶಾಲಾ ಶುಲ್ಕ ಪಾವತಿಸದ ಕಾರಣ ಪರೀಕ್ಷಾ ಹಾಲ್ ಪ್ರವೇಶ ನಿರಾಕರಣೆ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬರೇಲಿ: ಶುಲ್ಕ ಪಾವತಿಸದ ಕಾರಣಕ್ಕೆ ಖಾಸಗಿ ಶಾಲೆಯೊಂದು ಪರೀಕ್ಷೆಗೆ ಕುಳಿತುಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ದುರ್ಗಾನಗರದ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ 9ನೇ ತರಗತಿಯಲ್ಲಿ ಓದುತ್ತಿದ್ದಳು. ದುರ್ಗಾನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳ ಕುಟುಂಬಸ್ಥರು ಶಾಲಾ ಶುಲ್ಕವನ್ನು ಕಟ್ಟಲು ವಿಫಲವಾಗಿದ್ದರು. ಈ ಹಿನ್ನಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ : Bus accident: ಕ್ರಿಶ್ಚಿಯನ್ ಸ್ಮಶಾನಕ್ಕೆ ಬಸ್‌ ಢಿಕ್ಕಿ : ಸಮಾಧಿಗಳಿಗೆ ಹಾನಿ

ಇದನ್ನೂ ಓದಿ : ಸರಕಾರಿ ನೌಕರರ ಗಮನಕ್ಕೆ : ಹಳೆಯ ಪಿಂಚಣಿ ಯೋಜನೆಗೆ ಸೇರಲು ಹೀಗೆ ಮಾಡಿ

Illegal stay- 18 Arrest: Arrest of 18 Bangladeshi nationals who stayed illegally in Maharashtra

Comments are closed.