LPG Blast 5 Death : ತಾಯಿ ಅಡುಗೆ ಮಾಡುತ್ತಿದ್ದಾಗ ಎಲ್‌ಪಿಜಿ ಸಿಲಿಂಡರ್ ಸ್ಫೋಟ, ಐದು ಮಕ್ಕಳು ಸಾವು

ಬಿಹಾರ : ತಾಯಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಸ್ಪೋಟಗೊಂಡು ಐವರು ಮಕ್ಕಳು ಸುಟ್ಟು ಕರಕಲಾಗಿ, (LPG Blast 5 Child Death) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ ಗ್ರಾಮದಲ್ಲಿ ನಡೆದಿದೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ನಂತರದಲ್ಲಿ ಜಿಲ್ಲಾಡಳಿತ ಉನ್ನತಮಟ್ಟದ ತನಿಖೆಗೆ ಆದೇಶಿಸಿದೆ.

ಛೋಟು ಪಾಸ್ವಾನ್ ಅವರ ಪುತ್ರ ಅಂಕುಶ್ (12 ವರ್ಷ), ನಾಲ್ವರು ಪುತ್ರಿಯರಾದ ಅಂಶು ಕುಮಾರಿ (8 ವರ್ಷ), ಸೀಮಾ ಕುಮಾರಿ (4 ವರ್ಷ), ಶಿವನಿ ಕುಮಾರಿ (6 ವರ್ಷ) ಮತ್ತು ಸೋನಿ ಕುಮಾರಿ (3 ವರ್ಷ) ಮೃತ ದುರ್ದೈವಿಗಳಾಗಿದ್ದಾರೆ. ಅಡುಗೆ ಮನೆಯಲ್ಲಿ ಮಕ್ಕಳ ತಾಯಿ ಅಡುಗೆ ಮಾಡುತ್ತಿದ್ದು, ಪಕ್ಕದಲ್ಲೇ ಮಕ್ಕಳು ಆಟವಾಡುತ್ತಿದ್ದರು. ಇದೇ ವೇಳೆ ತಾಯಿ ಯಾವುದೋ ಕೆಲಸದ ನಿಮಿತ್ತ ಕೊಠಡಿಯಿಂದ ಹೊರಗೆ ಹೋದಾಗ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಐವರು ಮಕ್ಕಳು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ತಾಯಿ ಮನೆಯೊಳಗೆ ಬರುವ ಹೊತ್ತಿಗಾಗಲೇ ಮಕ್ಕಳ ಪ್ರಾಣಪಕ್ಷಿ ಹಾರಿ ಹೋಗಿತ್ತು. ಬೆಂಕಿಯ ತೀವ್ರತೆ ಅಕ್ಕಪಕ್ಕದ ಸ್ಥಳಕ್ಕೂ ವ್ಯಾಪಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟ ಹಾಗೂ ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಗ್ರಾಮದ ಜನರು ಸ್ಥಳಕ್ಕೆ ಆಗಮಿಸಿದರು. ಬೆಂಕಿ ನಂದಿಸಿದ ನಂತರ, ಸುಟ್ಟ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು, ಆದರೆ ಅದಕ್ಕೂ ಮೊದಲು ಐವರೂ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪಡೆದ ಬಂಕಾ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಗುಪ್ತಾ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಸಿಲಿಂಡರ್‌ ಸ್ಪೋಟದ ಕುರಿತು ರಾಜೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಸಿಲಿಂಡರ್‌ ಸ್ಪೋಟಗೊಂಡಿದೆ ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತೀಚಿನ ದಿನಗಳಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣದ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕರು ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ : ಚಲಿಸುತ್ತಿದ್ದ ಕಾರಿನಲ್ಲಿ 18 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ ಇನ್‌ಸ್ಟಾಗ್ರಾಂ ಗೆಳೆಯ

ಇದನ್ನೂ ಓದಿ : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಅಪ್ರಾಪ್ತರು ಸೇರಿ 9 ಮಂದಿಯ ಬಂಧನ

( LPG Blast 5 Child Death : when mother was cooking food, 5 children death due to burns)

Comments are closed.