ತಿರುವನಂತಪುರ : ಇತ್ತೀಚಿನ ದಿನಗಳಲ್ಲಿ ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದು. ಹೊರಗಡೆ ಹೊಗಲು ಹಲವು ಭಾರಿ ಯೋಚಿಸುವ ಸನ್ನಿವೇಶ ಸೃಷ್ಟಿಯಾಗಿದೆ. ಇದೀಗ ಪರೀಕ್ಷಾ ಕೊಠಡಿಯಿಂದ ಹೊರಬಂದ ವಿದ್ಯಾರ್ಥಿನಿಯನ್ನು ಸಹಪಾಠಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆಗೆ ಮೃತಪಟ್ಟಿದ್ದಾಳೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಪಳೈ ಪಟ್ಟಣದ ಸೇಂಟ್ ಥಾಮಸ್ ಕಾಲೇಜಿನ ಆವರಣದಲ್ಲೇ ಆಘಾತಕಾರಿ ಘಟನೆಯೊಂದು ನಡೆದಿದೆ. 22 ವರ್ಷದ ಅಭಿಷೇಕ್ ಬೈಜು ಎಂಬಾತನೇ ಸಹಪಾಠಿಯನ್ನು ಕೊಲೆಗೈದ ಆರೋಪಿ. ಘಟನೆಯ ಬೆನ್ನಲ್ಲೇ ಆರೋಪಿ ಕಾಲೇಜಿನಲ್ಲಿಯೇ ಇದ್ದು ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: Crime News : ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ
ಕಾಲೇಜಿನಲ್ಲಿ ವಿಶ್ವವಿದ್ಯಾಲಯದ ಪರೀಕ್ಷೆಗಳು ನಡೆಯುತ್ತಿದ್ದು ಕೆಲವು ವಿದ್ಯಾರ್ಥಿಗಳು ಹೊರಗಡೆಗೆ ಇದ್ದರು. ಈ ಇಬ್ಬರೂ ವಿದ್ಯಾರ್ಥಿಗಳು ಪರೀಕ್ಷೆಯನ್ನು ಪೂರ್ಣಗೊಳಿಸಿ ಪರೀಕ್ಷಾ ಕೊಠಡಿಯಿಂದ ಹೊರಬಂದಿದ್ದರು. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟಿತ್ತು. ಕೂಡಲೇ ವಿದ್ಯಾರ್ಥಿಯು ಚಾಕುವನ್ನು ತೆಗೆದುಕೊಂಡು ವಿದ್ಯಾರ್ಥಿನಿಯ ಕುತ್ತಿಗೆಗೆ ಇರಿದಿದ್ದಾನೆ.
ಸ್ಥಳದಲ್ಲೇ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಕೆ ಸಾವನ್ನಪ್ಪಿದ್ದಾಳೆ. ಇಬ್ಬರೂ ಬಿಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದರು. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಕೊಟ್ಟಾಯಂ ಎಸ್ಪಿ ಡಾ. ಶಿಲ್ಪಾ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:Crime News : ಯುವತಿಯನ್ನು ನಗ್ನಗೊಳಿಸಿ ವಿಡಿಯೋ : ಹಣಕ್ಕೆ ಡಿಮ್ಯಾಂಡ್ ಇಟ್ಟ ಆರೋಪಿಗಳ ಬಂಧನ