Crime News : ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ನೊಯ್ಡಾ : ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದ 55 ವರ್ಷದ ಮಹಿಳೆಯೋರ್ವಳನ್ನು ಕಾಡಿಗೆ ಎಳೆದೊಯ್ದು ನಾಲ್ವರು ದುಷ್ಕರ್ಮಿಗಳು ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಘಟನೆ ಗ್ರೇಟರ್‌ ನೋಯ್ಡಾದಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಮಹಿಳೆ ಹೊಲದಲ್ಲಿ ಹುಲ್ಲನ್ನು ಕತ್ತರಿಸುತ್ತಿದ್ದ ಈ ವೇಳೆಯಲ್ಲಿ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ವ್ಯಕ್ತಿ ಮಹಿಳೆಯನ್ನು ಬಲವಂತವಾಗಿ ಪಕ್ಕದಲ್ಲಿದ್ದ ಕಾಡಿಗೆ ಎಳೆದೊಯ್ದಿದ್ದಾನೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರದಲ್ಲಿ ಸ್ಥಳಕ್ಕೆ ಬಂದ ಮತ್ತೆ ಮೂವರು ಮಹಿಳೆಯ ಮೇಲೆ ಅತ್ಯಾಚಾರವನ್ನೆಸಗಿದ್ದಾರೆ.

ಮಹಿಳೆ ಕಾಮುಕರ ಕೈಯಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದಾರೆ. ಈ ವೇಳೆ ಮನೆಯವರ ಸಹಕಾರದಿಂದಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗು ತ್ತಿದೆ. ಸದ್ಯ ಅತ್ಯಾಚಾರಕ್ಕೆ ಒಳಗಾಗಿರುವ ಮಹಿಳೆಯ ಸ್ಥಿತಿ ಉತ್ತಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿ ಸಂತ್ರಸ್ತ ಮಹಿಳೆಯ ಊರಿನವನೇ ಆಗಿದ್ದು, ಆತನ ಗುರುತು ಪತ್ತೆ ಹಚ್ಚಲಾಗಿದೆ. ಆದರೆ ಉಳಿದ ಮೂವರ ಗುರುತು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಈ ಕುರಿತು ಗ್ರೇಟರ್ ನೋಯ್ಡಾದ ಜೇವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದಗದು, ತನಿಖೆ ನಡೆಸಲಾಗುತ್ತಿದ ಎಂದು ಡಿಸಿಪಿ ವೃಂದಾ ಶುಕ್ಲಾ ತಿಳಿಸಿದ್ದಾರೆ.

ಇದನ್ನೂ ಓದಿ : ಅಪ್ರಾಪ್ತ ಶಾಲಾ ಬಾಲಕಿಯ ಕಿಡ್ನಾಪ್‌ : ಅತ್ಯಾಚಾರವೆಸಗಿದ ಕ್ಯಾಬ್‌ ಚಾಲಕ

ಇದನ್ನೂ ಓದಿ: ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ

( The woman was dragged into the woods and raped )

Comments are closed.