IndiGo airlines : ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ : ಓರ್ವ ಪ್ರಯಾಣಿಕ ಸಾವು

ರಾಂಚಿ: ಮುಂಬೈನಿಂದ ರಾಂಚಿ ತೆರಳುತ್ತಿದ್ದ ಇಂಡಿಗೋ ವಿಮಾನವು (IndiGo airlines) ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರಕ್ತ ವಾಂತಿ ಮಾಡಿಕೊಳ್ಳಲು ಆರಂಭಿಸಿದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ ಎನ್ನಲಾಗುತ್ತಿದೆ. ಅಸ್ವಸ್ಥಗೊಂಡಿರುವ ಪ್ರಯಾಣಿಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೇ ಆತ ಹಲವು ಸಮಯದಿಂದಲೂ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗುತ್ತಿದೆ.

ಪ್ರಯಾಣಿನನ್ನು ದೇವಾನಂದ್ ತಿವಾರಿ ಎಂದು ಗುರುತಿಸಲಾಗಿದೆ. 62 ವರ್ಷದ ತಿವಾರಿ ಅವರು ಸಿಕೆಡಿ ಮತ್ತು ಕ್ಷಯರೋಗದಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ರಕ್ತವಾಂತಿ ಕಾಣಿಸಿಕೊಂಡಿದೆ ಎಂದು ಕಿಮ್ಸ್ ಆಸ್ಪತ್ರೆಯ ಬ್ರ್ಯಾಂಡಿಂಗ್ ಮತ್ತು ಸಂವಹನಗಳ ಡಿಜಿಎಂ ಏಜಾಜ್ ಶಮಿ ಹೇಳಿದ್ದಾರೆ. ಇದನ್ನೂ ಓದಿ : Delhi Crime Case : ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಸರಕಾರಿ ಅಧಿಕಾರಿಯನ್ನು ವಶಪಡಿಸಿಕೊಂಡ ಪೊಲೀಸರು

ಇದನ್ನೂ ಓದಿ : Saligrama News : ಸಾಲಿಗ್ರಾಮ : ಗುರುನರಸಿಂಹ ದೇವರ ಪವಾಡ ತಪ್ಪಿದ ಬಾರೀ ದುರಂತ

ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಮೀಪದಲ್ಲಿನ ಸರಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ಶಮಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

IndiGo airlines: IndiGo flight makes emergency landing: One passenger dies

Comments are closed.