Jammu and Kashmir : ಪ್ರವಾಸಿ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಗಾಯ

ಜಮ್ಮು & ಕಾಶ್ಮೀರ : ಪ್ರವಾಸಿಗರು ಪ್ರಯಾಣಿಸುತ್ತಿದ್ದ ವಾಹನವೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಕನಿಷ್ಠ ಆರು ಮಂದಿ (Jammu and Kashmir) ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತವು ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಪ್ರಯಾಣಿಕರನ್ನು ಉಧಂಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Electric Shock : ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊರ್ವ ಸಾವು

ಇದನ್ನೂ ಓದಿ : New York : ಮನೆಯ ಮುಂದಿದ್ದ ಮರಗಳನ್ನು ಕಡಿದವನಿಗೆ 12 ಕೋಟಿ ದಂಡ ವಿಧಿಸಿದ ನ್ಯಾಯಾಲಯ

ಚಾಲಕನನ್ನು ಹೊರತುಪಡಿಸಿ, ಉಳಿದ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು. ಕೆಲವು ದಿನಗಳ ಹಿಂದೆ, ಅಮರನಾಥ್ ಭದ್ರತಾ ಬೆಂಗಾವಲು ಪಡೆಯ ಭಾಗವಾಗಿರುವ ವಾಹನವು ಉಧಂಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಸ್ಕಿಡ್ ಆಗಿತ್ತು. ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Jammu and Kashmir: Tourist vehicle collides with divider, six injured

Comments are closed.