ಕಾನ್ಪುರ ಪೊಲೀಸರ ಹತ್ಯೆ ಪ್ರಕರಣ : ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಎನ್’ಕೌಂಟರ್ ನಲ್ಲಿ ಹತ್ಯೆ

0

ಕಾನ್ಪುರ : ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದ್ದ 8 ಮಂದಿ ಪೊಲೀಸರ ಹತ್ಯೆಗೆ ಕಾರಣನಾಗಿದ್ದ ಮುಖ್ಯ ಆರೋಪಿ ಹಾಗೂ ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಅಮರ್ ದುಬೆಯನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರಪ್ರದೇಶದ ಹಮಿರ್ಪುರ್ ನಲ್ಲಿ ಎಸ್’ಟಿಎಫ್ ಪಡೆ ಎನ್’ಕೌಂಟರ್ ನಡೆಸಿದ್ದು, ಅಮರ್ ದುಬೆಯನ್ನು ಹತ್ಯೆ ಮಾಡಲಾಗಿದೆ.

ಉತ್ತರಪ್ರದೇಶ ರಾಜ್ಯದಲ್ಲಿ 60 ಅಪರಾಧ ಕೇಸುಗಳಲ್ಲಿ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಪಾತಕಿ ವಿಕಾಸ್ ದುಬೆಯನ್ನು ಬಂಧಿಸಲು ದಿಕ್ರು ಗ್ರಾಮಕ್ಕೆ ಪೊಲೀಸರು ತೆರಳಿದ್ದರು. ಪೊಲೀಸರು ಬರುವ ಸುಳಿವು ಅರಿತಿದ್ದ ವಿಕಾಸ್ ದುಬೆ ಸಹಚರರು, ರಸ್ತೆಗೆ ಅಡ್ಡಲಾಗಿ ಕಲ್ಲು-ಕಟ್ಟಿಗೆಗಳನ್ನು ಇಟ್ಟಿದ್ದರು.

ಪೊಲೀಸರು ಇವನ್ನು ತೆರವುಗೊಳಿಸಿ ದುಬೆ ಅವಿತಿದ್ದ ಮನೆಯತ್ತ ಆಗಮಿಸಲು ಅಣಿಯಾಗುತ್ತಿದ್ದಂತೆಯೇ ಆತನ ಮನೆಯಲ್ಲಿದ್ದ ರೌಡಿಗಳು ಪೊಲೀಸರ ಮೇಲೆ ಗುಂಡಿನ ಮಳೆಗೆರೆದಿದ್ದಾರೆ. ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ 4 ಪೇದೆಗಳು ಅಸುನೀಗಿದ್ದರು.

ಕ್ರಿಮಿನಲ್ ಗಳು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು. ಪೊಲೀಸರು ಈ ಹಿಂದೆ ಹೊಂದಿದ್ದ ಶಸ್ತ್ರಾಸ್ತ್ರಗಳು ದುಬೆಗೆ ದೊರೆತಿದ್ದು, ಅವುಗಳನ್ನೇ ಪೊಲೀಸರ ಮೇಲೆ ದಾಳಿ ನಾಡಲು ದುಬೆ ಸಹಚರರು ಬಳಸಿದ್ದರು. ಇದಕ್ಕೆ ಪ್ರತಿಯಾಗಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರೇಮ್ ಪ್ರಕಾಶ್ ಪಾಂಡೆ ಹಾಗೂ ಅತುಲ್ ದುಬೆ ಎಂಬ ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದರು.

Leave A Reply

Your email address will not be published.