ಕಾಪು: (Kapu bus accident) ಉಡುಪಿ ಸಮೀಪದ ಕಾಪುವಿನಲ್ಲಿ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಒಂದು ಢಿಕ್ಕಿ ಹೊಡೆದಿದ್ದು, ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೆ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ( ೧೩ ವರ್ಷ) ಎಂಬಾಕೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ.
ಇಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ವರ್ಷಿತಾ ರಾಷ್ಟ್ರೀಯ ಹೆದ್ದಾರಿ ೬೬ರ ಮಂದಾರ ಹೋಟೆಲ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಅತೀ ವೇಗದಿಂದ ಬಂದು ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ವರ್ಷಿತಾಳ ತಲೆಗೆ ತೀವ್ರ ಗಾಯಗಳಾಗಿದ್ದು, ವರ್ಷಿತಾಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು ಬಸ್ಸನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
ಇದನ್ನೂ ಓದಿ : ಹೋಳಿ ಹೆಸರಿನಲ್ಲಿ ಮಹಿಳೆಯರಿಗೆ ಕಿರುಕುಳ : ವಿವಾದ ಮೂಡಿಸಿದ ಭಾರತ ಮ್ಯಾಟ್ರಿಮೋನಿ ಜಾಹೀರಾತು
ಇದನ್ನೂ ಓದಿ : BMTC ಬಸ್‌ನಲ್ಲಿ ಅಗ್ನಿ ದುರಂತ, ಕಂಡಕ್ಟರ್ ಸಜೀವ ದಹನ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ
61 ವರ್ಷ ಪ್ರಾಯದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗ್ಗೆ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
Kapu bus accident: Kapu: Private bus collision: School girl seriously injured