Crime News : 6 ವರ್ಷ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್‌

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕಾಮುಕರ ಅಟ್ಟಹಾಸ ಹೆಚ್ಚುತ್ತಿದೆ. ಇದೀಗ ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಯನ್ನು ಚಿಕ್ಕಜಾಲ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಬೆಂಗಳೂರು ನಗರದ ಮಾದನಾಯಕನ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಂಜುನಾಥ ನಾಯಕ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಕುರಿತು ಪೋಷಕರು ಪೊಲೀಸರಿಗೆ ದೂರು ನೀಡಿದ್ರೂ ಕೂಡ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ.

ನಂತರ ಸ್ಥಳೀಯ ಮುಖಂಡರು ಪೊಲೀಸ್‌ ಠಾಣೆಯ ಮುಂಭಾಗದಲ್ಲಿ ಗಲಾಟೆ ಮಾಡಲು ಮುಂದಾಗುತ್ತಲೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮಗುವನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಲೈಂಗಿಕ ದೌರ್ಜನ್ಯ ಎಸಗಿರೋದು ದೃಢಪಟ್ಟಿದೆ. ಇದೀಗ ಚಿಕ್ಕಜಾಲ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : 33 ಜನರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬಂಧಿತ 23 ಮಂದಿ ಬೇರೆ ಬೇರೆ ಪಕ್ಷದ ರಾಜಕಾರಣಿಗಳು !

ಇದನ್ನೂ ಓದಿ : ಗೀತ ಗೋವಿಂದಂ ಸ್ಟೈಲ್‌ನಲ್ಲಿ ಬಸ್ಸಿನಲ್ಲಿ ಕಿಸ್‌ : ಬಳ್ಳಾರಿ ಮೂಲದ ಇಂಜಿನಿಯರ್‌ ಅರೆಸ್ಟ್‌

(6 years girls harassments accused arrest police )

Comments are closed.