ಕೆಪಿಸಿಸಿ ಅಧ್ಯಕ್ಷರಿಗೆ ಸಂಕಷ್ಟ: ಡಿ.ಕೆ.ಶಿವಕುಮಾರ್ ವಿರುದ್ಧ ವಾರೆಂಟ್

ಮಂಗಳೂರು: ಪ್ರಕರಣವೊಂದರಲ್ಲಿ ಹಲವು ಬಾರಿ ಸಮನ್ಸ್ ಜಾರಿ ಮಾಡಿದ ಮೇಲೂ ಸಾಕ್ಷಿ ಹೇಳಲು ಸತತವಾಗಿ ಗೈರಾದ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾರೆಂಟ್ ಜಾರಿಯಾಗಿದೆ.

ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ ಅವರು ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಅಸಮರ್ಪಕ ಪೊರೈಕೆ ಬಗ್ಗೆ ಮಾತನಾಡಲು ದೂರವಾಣಿ ಕರೆ ಮಾಡಿದ್ದರು. 2016 ರ ಫೆ.28 ರಂದು ನಡೆದಿದ್ದ  ಈ ಸಂಭಾಷಣೆ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.

ಬಳಿಕ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಮೆಸ್ಕಾಂ ಎಂಡಿ ಹಾಗೂ ಸುಳ್ಯ ಕಚೇರಿಯ ಅಂದಿನ ಪ್ರಭಾರ ಎಇಇಹರೀಶ್ ನಾಯ್ಕ ಮೂಲಕ  ಸಾಯಿ ಗಿರಿಧರ ವಿರುದ್ಧ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬಳಿಕ ಸಾಯಿ ಗಿರಿಧರ ಪೈ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಪ್ರಮುಖ ಸಾಕ್ಷಿಯಾಗಿದ್ದ ಡಿಕೆಶಿ ನ್ಯಾಯಾಲಯದ ಸಮನ್ಸ್ ಬಳಿಕವೂ ವಿಚಾರಣೆಗೆ ಹಾಗೂ ಸಾಕ್ಷಿಗೆ ಹಾಜರಾಗಿರಲಿಲ್ಲ.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಐಜಿಪಿ ಹಾಗೂ ಡಿಐಜಿಗೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆ.29 ಕ್ಕೆ ಮುಂದೂಡಲಾಗಿದೆ.

warrant against d k shivkumar from sulya court

Comments are closed.