Crime News : ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ : ಎರಡು ಕಡೆ ಮೂವರ ದುರ್ಮರಣ

ಚಿತ್ರದುರ್ಗ/ಚಿಕ್ಕಬಳ್ಳಾಪುರ : ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಜ್ಯದ ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಳೆವೂರು ಗ್ರಾಮದಲ್ಲಿನ ಜಯಣ್ಣ ಎಂಬವರಿಗೆ ಸೇರಿದ ಕೃಷಿ ಹೊಂಡದಲ್ಲಿ ಗಣೇಶ ಮೂರ್ತಿಯನ್ನು ಕೃಷಿ ಹೊಂಡದಲ್ಲಿ ವಿಸರ್ಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಹರಿಚರಣ್‌ ರೆಡ್ಡಿ ( 13 ವರ್ಷ) ಹಾಗೂ ಲಿಖಿತ್‌ (14 ವರ್ಷ) ಮೃತ ಬಾಲಕರು. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಕೋಟೆನಾಡು ಚಿತ್ರದುರ್ಗದಲ್ಲಿಯೂ ಗಣೇಶ ಮೂರ್ತಿಯ ವಿಸರ್ಜನೆಯ ವೇಳೆಯಲ್ಲಿ ದುರಂತರ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೊಂಡಾಪುರ ಗ್ರಾಮದಲ್ಲಿ ಗಣಪತಿಮೂರ್ತಿಯನ್ನು ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಯಲ್ಲಿ ವಿಸರ್ಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಚರಣ್‌ ರಾಜ್‌ (27 ವರ್ಷ) ಎಂಬ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಕುರಿತು ಹೊಸದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ರಾಜ್ಯ ಸರಕಾರ ಗಣೇಶ ಚತುರ್ಥಿ ಆಚರಣೆಗೆ ಅವಕಾಶವನ್ನು ಕಲ್ಪಿಸಿತ್ತು. ಆದರೆ ಜನರು ಮಾತ್ರ ಗಣೇಶ ಮೂರ್ತಿಯ ವಿಸರ್ಜನೆಯ ನೆಪದಲ್ಲಿ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ.

(Disaster of Ganesh statue: The death of three persons in Karnataka)

Comments are closed.