ಮೈಸೂರು : ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ದು ಪೊಲೀಸರು ಮಹಜರು ಕಾರ್ಯ ನಡೆಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು ಹೊರವಲಯದ ಲಲಿತಾದ್ರಿಯಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಏಳು ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಈಗಾಗಲೇ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುಪೂರ್‌ಗೆ ಕರೆದೊಯ್ದು ಆರೋಪಿಗಳ ಮನೆಯಲ್ಲಿನ ಬಟ್ಟೆ ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಈಗಾಗಲೇ ಹಲವು ಪ್ರಕರಣಗಳಲ್ಲಿ ತೊಡಕೊಂಡಿದ್ದಾರೆ. ಸಂತ್ರಸ್ತೆ ಹಾಗೂ ಸ್ನೇಹಿತನನ್ನು ಬೆದರಿಸಲು ಬಳಸಿದ ಮಾರಕಾಸ್ತ್ರಗಳನ್ನು ಪೊಲೀಸರು ಆರೋಪಿಗಳಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿಗಳ ಮನೆಯವರು ತಮ್ಮ ಮಕ್ಕಳನ್ನು ಎನ್‌ಕೌಂಟರ್ ಮಾಡದಂತೆ ಪೊಲೀಸರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
ಆದರೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಏಳನೆ ಆರೋಪಿ ಸೆಲ್ವ ಇನ್ನೂ ಕೂಡ ಪೊಲೀಸರ ಬಲೆಗೆ ಬಿದ್ದಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರ ತಂಡ ತಮಿಳುನಾಡಿನಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದೆ.
ಇದನ್ನೂ ಓದಿ : ಮೈಸೂರು ಗ್ಯಾಂಗ್ ರೇಪ್ : ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿಗಳು
ಇದನ್ನೂ ಓದಿ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಪೊಲೀಸರ ಮುಂದೆ ಸಂತ್ರಸ್ತೆಯ ಸ್ನೇಹಿತನ ಹೇಳಿದ್ದೇನು ಗೊತ್ತಾ ?
(Mysore Gangrape Accused dress And deadly weapons Seize Tamil Nadu)