Crime News : ನಿದ್ರೆ ಮಾತ್ರೆ ನೀಡಿ ಗೃಹಿಣಿಯ ಮೇಲೆ ಅತ್ಯಾಚಾರ : ಆರೋಪಿಯ ಬಂಧನ

ಕೊಪ್ಪಳ : ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಇಟ್ಟಿಗೆ ಬಟ್ಟಿ ಕೆಲಸಕ್ಕೆ ಬಂದಿದ್ದ ಗರ್ಭಿಣಿಗೆ ನಿದ್ರೆ ಮಾತ್ರೆಯನ್ನು ನೀಡಿ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಿರೇಬೆಣಕಲ್‌ ಗ್ರಾಮದಲ್ಲಿ ನಡೆದಿದೆ.

ಮಹೇಶ್‌ ಎಂಬಾತನೇ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪಿ. ಹಿರೇಬೆಣಕಲ್‌ ಸಮೀಪದಲ್ಲಿರುವ ಇಟ್ಟಿಗೆ ಬಟ್ಟಿಯಲ್ಲಿ ಗರ್ಭಿಣಿ ಮಹಿಳೆಯೋರ್ವಳು ಕೆಲಸ ಮಾಡುತ್ತಿದ್ದಳು. ಬೆಳಗಿನ ಜಾವ ಕೆಲಸಕ್ಕೆ ಬಂದಿದ್ದ ವೇಳೆಯಲ್ಲಿ ಮಹಿಳೆಗೆ ಚಹಾದಲ್ಲಿ ನಿದ್ರೆ ಮಾತ್ರೆಯನ್ನು ನೀಡಿದ್ದಾನೆ. ಇದರಿಂದ ಗರ್ಭಿಣಿ ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆಯೇ ಮಹೇಶ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.

ಇದನ್ನೂ ಓದಿ : ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ವಕೀಲ ರಾಜೇಶ್‌ ಭಟ್‌ ಅಮಾನತ್ತು, ಮೂವರು ಅರೆಸ್ಟ್‌

ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಗಂಗಾವತಿ ಪೊಲೀಸರು ಆರೋಪಿ ಮಹೇಶ್‌ನನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾಗಿದೆ.

Rape on housewife giving sleeping pill : Arrest of accused

Comments are closed.