Kerala Bus accident: ಕಾರಿಗೆ ಢಿಕ್ಕಿ ಹೊಡೆದ ಕೇರಳ ರಾಜ್ಯ ಬಸ್:‌ ಹಲವು ಪ್ರಯಾಣಿಕರಿಗೆ ಗಾಯ

ಪತ್ತನಂತಿಟ್ಟ: (Kerala Bus accident) ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಒಂದು ಎದುರಿಗೆ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಬಳಿಕ ಚರ್ಚ್‌ ನ ಗೋಡೆಗೆ ಬಸ್‌ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ ಹಲವು ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಪತ್ತನಂತಿಟ್ಟ ಜಿಲ್ಲೆಯ ಕಿಝವಲ್ಲೋರ್ ಬಳಿ ಈ ಅಪಘಾತ ಸಂಭವಿಸಿದ್ದು, ಎದುರಿಗೆ ಬರುತ್ತಿದ್ದ ಕಾರಿಗೆ ಬಸ್‌ ಢಿಕ್ಕಿ ಹೊಡೆದಿದೆ. ಕಾರಿಗೆ ಢಿಕ್ಕಿ ಹೊಡೆದ ಬಸ್‌ ನಂತರ ಚರ್ಚ್‌ ನ ಗೋಡೆಗೆ ಢಿಕ್ಕಿಯಾಗಿದೆ. ಪರಿಣಾಮ ಚರ್ಚ್‌ ನ ಗೋಡೆಗಳು ಕುಸಿದಿದ್ದು, ಬಸ್‌ ಕೂಡ ಜಖಂ ಆಗಿದೆ. ಘಟನೆಯಲ್ಲಿ ಬಸ್‌ ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಇದಕ್ಕೆ ಹಲವು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಪತ್ನಿಯನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿರಾಯ

ಅಲಿಗಢ: ಉತ್ತರ ಪ್ರದೇಶದ ಅಲಿಗಢ್‌ನ ರಟವಾಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದು ನಂತರ ತಾನೂ ಕೂಡ ನೇಣು ಬಿಗಿದುಕೊಂಡು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಯ ಹಿಂದಿನ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Three Truck catches fire: ಭೀಕರ ಅಪಘಾತ ಹೊತ್ತಿ ಉರಿದ 3 ಟ್ರಕ್ : ಇಬ್ಬರು ಸಜೀವ ದಹನ

ಇದನ್ನೂ ಓದಿ : Gajiyabad crime: ಪತ್ನಿಯೊಂದಿಗೆ ಜಗಳ, ಬಳಿಕ ಮನೆಗೆ ಬೆಂಕಿ: ಕಾರಣ ಏನು ಗೊತ್ತಾ…

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದು ನಂತರ ತಾನೂ ಕೂಡ ನೇಣು ಬಿಗಿದುಕೊಂಡು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಅಲಿಗಢ್‌ನ ರಟವಾಲಿ ಗ್ರಾಮದಲ್ಲಿ ಘಟನೆ ವರದಿಯಾಗಿದ್ದು, ಮಾಹಿತಿ ದೊರೆತ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಪತಿ ಮೊದಲು ಪತ್ನಿಯನ್ನು ಕತ್ತು ಹಿಸುಕಿ ಸಾಯಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ದಂಪತಿಯ ಮನೆಯಿಂದ ಶವಗಳನ್ನು ಹೊರತೆಗೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಬಾರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಹಿಂದಿನ ನಿಖರವಾದ ಕಾರಣವನ್ನು ತಿಳಿಯಲು ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Kerala Bus accident: Kerala state bus collided with a car: many passengers injured

Comments are closed.