Kerala student died: ಚಲಿಸುತ್ತಿದ್ದ ಬಸ್‌ ನಿಂದ ಬಿದ್ದು ವಿದ್ಯಾರ್ಥಿ ಸಾವು

ಕೊಯಮುತ್ತೂರು: (Kerala student died) ವೇಗವಾಗಿ ಚಲಿಸುತ್ತಿದ್ದ ಬಸ್‌ ನಿಂದ ಬಿದ್ದು, ಬಸ್‌ ನ ಹಿಂಬದಿ ಚಕ್ರದಡಿ ಸಿಲುಕಿ ಬಿಎಸ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಯಮುತ್ತೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳದ ಮರೈಯೂರ್‌ ನ ಮದನ್‌ ಲಾಲ್‌ (22 ವರ್ಷ) ಎಂದು ಗುರುತಿಸಲಾಗಿದ್ದು, ಈತ ಪೊಲ್ಲಾಚಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್‌ ಸೈನ್ಸ್‌ ಮೂರನೇ ವರ್ಷದ ವಿದ್ಯಾರ್ಥಿಯಾಗಿದ್ದಾನೆ.

ಮದನ್‌ಲಾಲ್‌ ಉಡುಮಲೈನಲ್ಲಿ ರೂಂ ಮಾಡಿಕೊಂಡು ವಾಸವಾಗಿದ್ದ. ಬೆಳಿಗ್ಗೆ ಕೊಯಮುತ್ತೂರಿನಿಂದ ಪಳನಿಗೆ ಖಾಸಗಿ ಬಸ್‌ ನಲ್ಲಿ ಮದನ್‌ ಲಾಲ್‌ ಸಂಚರಿಸುತ್ತಿದ್ದು, ಈ ವೇಳೆ ಈ ಅಪಘಾತ ಸಂಭವಿಸಿದೆ. ಬಸ್‌ ವೇಗವಾಗಿ ಚಲಿಸುತ್ತಿದ್ದು, ಬಸ್‌ ನ ಫೂಟ್‌ ಬೋರ್ಡ್‌ ಮೇಲೆ ವಿದ್ಯಾರ್ಥಿ ನಿಂತುಕೊಂಡಿದ್ದ. ವೇಗವಾಗಿ ಚಲಿಸುತ್ತಿದ್ದ ಬಸ್‌ ರಸ್ತೆಯಲ್ಲಿ ತಿರುವು ತೆಗೆದುಕೊಳ್ಳುತ್ತಿರುವಾಗ ಫೂಟ್‌ ಬೋರ್ಡ್‌ ಮೇಲೆ ನಿಂತಿದ್ದ ಮದನ್‌ ಲಾಲ್‌ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಕೆಳಗೆ ಬಿದ್ದ ಮದನ್‌ ಲಾಲ್‌ ಬಸ್‌ ನ ಹಿಂಬದಿ ಚಕ್ರದಡಿ ಸಿಲುಕಿದ್ದು, ಬಸ್‌ ಚಕ್ರ ಆತನ ಮೈಮೇಲೆ ಹರಿದು ಹೋಗಿದೆ.

ಮೈಮೇಲೆ ಬಸ್‌ ಹರಿದ ಪರಿಣಾಮ ವಿದ್ಯಾರ್ಥಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ಮಾಹಿತಿ ತಿಳಿದ ಕೋರಮಂಗಲ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇನ್ನೂ ಅಪಘಾತಕ್ಕೆ ಕಾರಣವಾದ ಬಸ್‌ ಅನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Mother killed her children: ತನ್ನ ಎರಡು ಮಕ್ಕಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ತನ್ನ ಎರಡು ಮಕ್ಕಳನ್ನು ಕತ್ತು ಹಿಸುಕಿ ಕೊಂದ ಕ್ರೂರ ತಾಯಿ

ಮಹಾರಾಷ್ಟ್ರದ ಔರಂಗಾಬಾದ್ ಸಾದತ್‌ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಮಹಿಳೆ ತನ್ನ ಆರು ವರ್ಷದ ಮಗಳು ಮತ್ತು ನಾಲ್ಕು ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಮಕ್ಕಳನ್ನು ಕೊಂದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಆ ಮಹಿಳೆ ಈ ಕೃತ್ಯವೆಸಗಲು ಹಿಂದಿರುವ ನೈಜ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ : ಬೆಳ್ತಂಗಡಿ ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸರ ದಾಳಿ

ಇದನ್ನೂ ಓದಿ : Jewelery staff murder case: ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ: ಹಂತಕನ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

Kerala student died: A student died after falling from a moving bus

Comments are closed.