Kerala train attack: ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಪ್ರಕರಣ : ಆರೋಪಿ ಅಂದರ್‌

ಕೋಜಿಕ್ಕೋಡ್‌ : (Kerala train attack) ರೈಲಿನ ಭೋಗಿಯಲ್ಲಿ ಬೆಂಕಿ ಹಚ್ಚಿ ವ್ಯಕ್ತಿಯೊಬ್ಬ ಪರಾರಿಯಾದ ಘಟನೆ ಎರಡು ದಿನಗಳ ಹಿಂದೆ ನಡೆದಿತ್ತು. ಇದೀಗ ಮೂವರ ಸಾವಿಗೆ ಕಾರಣವಾದ ಆರೋಪಿಯನ್ನು ಗುರುತಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದರು.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಈ ಬಗ್ಗೆ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿದ ಪೊಲೀಸರು ಕೇರಳ ರೈಲಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿನ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶಾರುಖ್ ಸೈಫಿ ಎಂದು ಗುರುತಿಸಲಾಗಿದ್ದು, ಏಪ್ರಿಲ್ 4 ಮತ್ತು 5 ರ ಮಧ್ಯರಾತ್ರಿ ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಬಂಧಿಸಲಾಯಿತು.

ಪೊಲೀಸರು ಶಾರುಖ್ ಸೈಫಿಯನ್ನು ಬಂಧಿಸಿದ್ದು ಹೇಗೆ?
ಕೋಝಿಕ್ಕೋಡ್‌ನಲ್ಲಿ ಅಲಪುಳ-ಕಣ್ಣೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ನಂತರ ಆರೋಪಿ ಪರಾರಿಯಾಗಿದ್ದನು. ಮಂಗಳವಾರ ಆತನ ಲೊಕೇಶನ್ ರತ್ನಗಿರಿಯಲ್ಲಿ ಪತ್ತೆಯಾಗಿತ್ತು. ರೈಲಿನಿಂದ ಇಳಿಯುವಾಗ ಬಿದ್ದು ತಲೆಗೆ ಗಾಯಗೊಂಡಿದ್ದರಿಂದ ರತ್ನಗಿರಿಯ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದನು. ಆದರೆ, ಚಿಕಿತ್ಸೆ ಪೂರ್ಣಗೊಳ್ಳದೆ ಆಸ್ಪತ್ರೆಯಿಂದ ಓಡಿ ಹೋಗಿದ್ದಾನೆ. ನಂತರ ರತ್ನಗಿರಿ ಪ್ರದೇಶದಲ್ಲಿ ಶೋಧ ನಡೆಸಲಾಗಿದ್ದು, ಶಾರುಖ್ ಸೈಫಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಸದ್ಯ ಆರೋಪಿ ಆರ್‌ಪಿಎಫ್ ರತ್ನಗಿರಿಯ ವಶದಲ್ಲಿದ್ದು, ಆರೋಪಿಯನ್ನು ವಿಚಾರಣೆ ಮಾಡಲು ಕೇರಳ ಪೊಲೀಸರು ರತ್ನಗಿರಿ ತಲುಪಿದ್ದಾರೆ.

ಘಟನೆಯ ವಿವರ :
ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ತರಹದ ದ್ರವ ತುಂಬಿದ್ದ ಎರಡು ಬಾಟಲಿಗಳೊಂದಿಗೆ ‘ಡಿ1’ ಕೋಚ್‌ಗೆ ನುಗ್ಗಿದ್ದು, ನಂತರ ಪ್ರಯಾಣಿಕರೊಂದಿಗೆ ಜಗಳವಾಡಿದ್ದ. ಇದಾದ ಬಳಿಕ ಪ್ರಯಾಣಿಕರು ಮತ್ತು ರೈಲಿನ ಬೋಗಿಗೆ ಪೆಟ್ರೋಲ್‌ ಅನ್ನು ಚೆಲ್ಲಿ, ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ತಿಳಿಸಿದ್ದಾರೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಕೆಲ ಪ್ರಯಾಣಿಕರು ರೈಲಿನ ಚೈನ್ ಎಳೆದಿದ್ದು, ರೈಲು ನಿಂತಿದ್ದರಿಂದ ಆರೋಪಿ ಪರಾರಿಯಾಗಿದ್ದನು. ಆತನಿಗೂ ಸುಟ್ಟ ಗಾಯಗಳಾಗಿವೆ.

ಇದನ್ನೂ ಓದಿ : Home theater explosion: ಮದುವೆಯ ಉಡುಗೊರೆಯಾಗಿ ಪಡೆದಿದ್ದ ಹೋಮ್ ಥಿಯೇಟರ್ ಸ್ಫೋಟ : 2 ಸಾವು, 4 ಜನರಿಗೆ ಗಾಯ

ಇನ್ನೂ ಬೆಂಕಿ ಹೊತ್ತಿಕೊಳ್ಳುತ್ತಲೇ ರೈಲಿನಿಂದ ಹಾರಿ ಮೂವರು ಮೃತಪಟ್ಟಿದ್ದಾರೆ. ಸೋಮವಾರ ಮುಂಜಾನೆ ಹಳಿಗಳ ಮೇಲೆ ಹುಡುಕಾಟ ನಡೆಸಿದಾಗ ಅವರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಿಚಾರಣೆ ನಡೆಯುತ್ತಿದೆ.

Kerala train attack: Case of setting fire in Kerala train: Accused Andar

Comments are closed.