Kidnap Case: ಮನೆಗೆ ನುಗ್ಗಿ ಯುವತಿಯನ್ನು ಅಪಹರಿಸಿದ 100 ಜನ ಯುವಕರ ಗುಂಪು: ವಿಡಿಯೋ ವೈರಲ್‌

ಹೈದರಾಬಾದ್: (Kidnap Case) ಮನೆಗೆ ನುಗ್ಗಿದ ಸುಮಾರು 100 ಜನರು 24 ವರ್ಷದ ಯುವತಿಯನ್ನು ಆಕೆಯ ಮನೆಯಿಂದ ಅಪಹರಿಸಿರುವ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಆದಿಬಟ್ಲಾದಲ್ಲಿ ಶುಕ್ರವಾರ ನಡೆದಿದೆ. ವೈಶಾಲಿ ಎಂಬ ಯುವತಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಸುಮಾರು 100 ಪುರುಷರು ಅವರ ಮನೆಗೆ ನುಗ್ಗಿ ಅವರ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ನಂತರ ಬಲವಂತವಾಗಿ ಅವರ ಮಗಳನ್ನು ಮನೆಯಿಂದ ಎಳೆದುಕೊಂಡು ಹೋಗಿದ್ದಾರೆ. ಯುವಕರು ಯುವತಿಯನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಎಲ್ಲೆಡೆ ವೈರಲ್‌ ಆಗಿದೆ.

ತೆಲಂಗಾಣದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 24 ವರ್ಷದ ಯುವತಿಯನ್ನು ಶುಕ್ರವಾರ ಪುರುಷರ ದೊಡ್ಡ ಗುಂಪೊಂದು ಮನೆಯಿಂದ ಅಪಹರಿಸಿದೆ (Kidnap Case). ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 16 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಗಂಟೆಯೊಳಗೆ ಯುವತಿಯನ್ನು ರಕ್ಷಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿಯಾಗಿರುವ 26 ವರ್ಷದ ನವೀನ್ ರೆಡ್ಡಿ ಈಗಾಗಲೇ ವೈಶಾಲಿಯೊಂದಿಗೆ ಮದುವೆಯಾಗಿರುವುದಾಗಿ ತಿಳಿಸಿದ್ದಾನೆ. ನಾನು ನನ್ನ ಹೆಂಡತಿಯನ್ನು ಮನೆಗೆ ಕರೆದುಕೊಂಡು ಹೋಗಲು ಸಾಕಷ್ಟು ಪ್ರಯತ್ನಿಸಿದೆ. ಆಕೆ ಡೆಂಟಿಸ್ಟ್​ ಆದ ಬಳಿಕ ಆಕೆಯ ಅಪ್ಪ-ಅಮ್ಮ ಅವಳ ಮನಸನ್ನು ಬದಲಾಯಿಸಿ, ನನ್ನಿಂದ ದೂರ ಮಾಡಿದ್ದಾರೆ. ಹೀಗಾಗಿ, ಅವರ ಮನೆಗೆ ನುಗ್ಗಿ ಆಕೆಯನ್ನು ಎಳೆದುಕೊಂಡು ಹೋಗಿದ್ದೇವೆ ಎಂದು ನವೀನ್ ರೆಡ್ಡಿ ಪೊಲೀಸರಿಗೆ ತಿಳಿಸಿದ್ದಾನೆ.‌

ಇದನ್ನೂ ಓದಿ : Crime: ಗೆಳೆಯರೊಂದಿಗೆ ಪತ್ನಿಯನ್ನು ಮಲಗಿಸಿ ವೀಡಿಯೋ ಮಾಡುತ್ತಿದ್ದ ಗಂಡನಿಗೆ ನಾದಿನಿಯೂ ಬೇಕಂತೆ !

ಇದನ್ನೂ ಓದಿ : Attack on Byndur boys:‌ ಬೆಂಗಳೂರಲ್ಲಿ ಬೈಂದೂರು ಹುಡುಗರ ಮೇಲೆ ಹಲ್ಲೆ ಪ್ರಕರಣ: ಮೂವರು ಅರೆಸ್ಟ್

ಎಎನ್‌ಐ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಗುಂಪೊಂದು ಆ ಯುವತಿಯ ಮನೆಯೊಳಗೆ ನುಗ್ಗುತ್ತಿರುವುದನ್ನು ನೋಡಬಹುದು. ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಮನೆಯ ಬಳಿ ನಿಲ್ಲಿಸಿದ್ದ ಕಾರಿಗೆ ಹಾನಿ ಮಾಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುರುಷರು ಆ ಯುವತಿಯ ಸಂಬಂಧಿಕರನ್ನು ಥಳಿಸುವ ದೃಶ್ಯ ಕಾಣಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಆರೋಪಿಗಳ ವಿರುದ್ಧ ಕೊಲೆ ಯತ್ನ ಮತ್ತು ಅಪಹರಣ ಸೇರಿದಂತೆ ಇತರೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

(Kidnap Case) A 24-year-old woman was abducted from her house by about 100 people who broke into her house on Friday in Adibatla of Ranga Reddy district of Telangana. According to a complaint filed by the parents of a young girl named Vaishali, around 100 men barged into her house and vandalized their houses.

Comments are closed.