ಸೋಮವಾರ, ಏಪ್ರಿಲ್ 28, 2025
HomeCrimeKills Baby Girl: ಹೆಣ್ಣು ಮಗುವಿಗೆ ಜನ್ಮ ನೀಡಿ ನವಜಾತಶಿಶುವನ್ನು ಕತ್ತು ಹಿಸುಕಿ ಕೊಲೆಗೈದ ಹದಿಹರೆಯದ...

Kills Baby Girl: ಹೆಣ್ಣು ಮಗುವಿಗೆ ಜನ್ಮ ನೀಡಿ ನವಜಾತಶಿಶುವನ್ನು ಕತ್ತು ಹಿಸುಕಿ ಕೊಲೆಗೈದ ಹದಿಹರೆಯದ ಬಾಲಕಿ

- Advertisement -

ನಾಗ್ಪುರ: (Kills Baby Girl) ಲೈಂಗಿಕ ಶೋಷಣೆಗೆ ಬಲಿಯಾದ 15 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿ ನವಜಾತ ಶಿಶುವನ್ನು ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಬಾಲಕಿಯ ವಿರುದ್ದ ಪ್ರಕರಣ ದಾಖಲಾಗಿದ್ದು, ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಇದೇ ಕಾರಣಕ್ಕೆ ಬಾಲಕಿ ಗರ್ಭವತಿಯಾಗಿದ್ದಳು. ತನಗೆ ಕೆಲವು ಆರೋಗ್ಯ ಸಮಸ್ಯೆ ಇದೆ ಎಂದು ಹೇಳುವ ಮೂಲಕ ತನ್ನ ತಾಯಿಯಿಂದ ಗರ್ಭಧರಿಸಿದ ವಿಚಾರವನ್ನು ಮರೆಮಾಚಿದ್ದಳು. ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಬಾಲಕಿ ಯೂಟ್ಯೂಬ್‌ ವಿಡಿಯೋಗಳನ್ನು ವೀಕ್ಷಿಸಲು ಪ್ರಾರಂಭಿಸಿದಳು.

ನಂತರ ಬಾಲಕಿ ಮಾರ್ಚ್ 2 ರಂದು ತನ್ನ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕೆಲವು ಯೂಟ್ಯೂಬ್‌ ವಿಡಿಯೋಗಳಿಂದ ಪ್ರಚೋದನೆಗೆ ಒಳಗಾಗಿ ಬಾಲಕಿ ಆಗ ತಾನೇ ಜನಿಸಿದ ನವಜಾತ ಶಿಶುವನ್ನು ಕತ್ತು ಹಿಸುಕಿ ಕೊಲೆಗೈದಿದ್ದಾಳೆ. ನಂತರ ಆಕೆ ನವಜಾತ ಶಿಶುವಿನ ಶವವನ್ನು ತನ್ನ ಮನೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಾಳೆ. ಮನೆಗೆ ಮರಳಿದ ತಾಯಿ ಬಾಲಕಿಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆಗ ಬಾಲಕಿ ತನ್ನ ತಾಯಿಗೆ ವಿಚಾರವನ್ನು ವಿವರಿಸಿದ್ದಾಳೆ. ನಂತರ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನವಜಾತ ಶಿಶುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಇದನ್ನೂ ಓದಿ : Illegal stay- 18 Arrest: ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ತಂಗಿದ್ದ 18 ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಇದನ್ನೂ ಓದಿ : Bus accident: ಕ್ರಿಶ್ಚಿಯನ್ ಸ್ಮಶಾನಕ್ಕೆ ಬಸ್‌ ಢಿಕ್ಕಿ : ಸಮಾಧಿಗಳಿಗೆ ಹಾನಿ

ಇದೀಗ ಬಾಲಕಿಯ ವಿರುದ್ದ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಕೊಲೆ ಆರೋಪ ಹೊರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಇನ್ನೂ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Bus truck accident: ಬಸ್‌ಗೆ ಟ್ರಕ್ ಢಿಕ್ಕಿ: ಒಂದೇ ಕುಟುಂಬದ 4 ಮಂದಿ ಸೇರಿದಂತೆ 7 ಸಾವು

Kills Baby Girl: Teenage girl strangles newborn after giving birth to a baby girl

RELATED ARTICLES

Most Popular