ಬೆಂಗಳೂರು : KSRTC bus collides with Metro Pillar : ಬೆಂಗಳೂರಿನ ಮೈಸೂರು ರಸ್ತೆಯ ಮೆಟ್ರೋ ಪಿಲ್ಲರ್ ಬಳಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್ಆರ್ಟಿಸಿ ಬಸ್ವೊಂದು ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತಕ್ಕೀಡಾದ ಕೆಎಸ್ಆರ್ಟಿಸಿ ಬಸ್ ಮಡಿಕೇರಿಯಿಂದ ಮೈಸೂರು ರಸ್ತೆ ಮಾರ್ಗವಾಗಿ ಬೆಂಗಳೂರು ಕಡೆಗೆ ಆಗಮಿಸುತ್ತಿತ್ತು ಎನ್ನಲಾಗಿದೆ. ಆದರೆ ಮೈಸೂರು ರಸ್ತೆ ಬಳಿಯಲ್ಲಿರುವ ಭಾರತ್ ಪೆಟ್ರೋಲಿಯಂ ಸಮೀಪದಲ್ಲಿರುವ ಮೆಟ್ರೋ ಪಿಲ್ಲರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತಕ್ಕೀಡಾದ ಕೆಎಸ್ಆರ್ಟಿಸಿ ಬಸ್ನಲ್ಲಿ ನಲವತ್ತೈದು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದರೆ ಉಳಿದ 25 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಬಸ್ಸು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಉಂಟಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕೆಎಸ್ಆರ್ಟಿಸಿ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮಾಹಿತಿ ತಿಳಿಯುತ್ತದ್ದಂತೆಯೇ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : SSLC Result : ಮೇ 20 ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಮೌಲ್ಯ ಮಾಪನಕ್ಕೆ ಗೈರಾದವರಿಗೆ ನೊಟೀಸ್
ಇದನ್ನೂ ಓದಿ :School Open Postpone : ಶಾಲೆ ಆರಂಭ ಮುಂದೂಡಿ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಭಾಪತಿ ಬಸವರಾಜ್ ಹೊರಟ್ಟಿ
KSRTC bus collides with Metro Pillar in Bengaluru