KSRTC bus collides with Metro Pillar : ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್​ :ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು : KSRTC bus collides with Metro Pillar : ಬೆಂಗಳೂರಿನ ಮೈಸೂರು ರಸ್ತೆಯ ಮೆಟ್ರೋ ಪಿಲ್ಲರ್​​ ಬಳಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್​ಆರ್​ಟಿಸಿ ಬಸ್​​​ವೊಂದು ಮೆಟ್ರೋ ಪಿಲ್ಲರ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತಕ್ಕೀಡಾದ ಕೆಎಸ್​ಆರ್​ಟಿಸಿ ಬಸ್​​ ಮಡಿಕೇರಿಯಿಂದ ಮೈಸೂರು ರಸ್ತೆ ಮಾರ್ಗವಾಗಿ ಬೆಂಗಳೂರು ಕಡೆಗೆ ಆಗಮಿಸುತ್ತಿತ್ತು ಎನ್ನಲಾಗಿದೆ. ಆದರೆ ಮೈಸೂರು ರಸ್ತೆ ಬಳಿಯಲ್ಲಿರುವ ಭಾರತ್​ ಪೆಟ್ರೋಲಿಯಂ ಸಮೀಪದಲ್ಲಿರುವ ಮೆಟ್ರೋ ಪಿಲ್ಲರ್​ ನಲ್ಲಿ ಈ ದುರ್ಘಟನೆ ಸಂಭವಿಸಿದೆ.


ಅಪಘಾತಕ್ಕೀಡಾದ ಕೆಎಸ್​ಆರ್​ಟಿಸಿ ಬಸ್​ನಲ್ಲಿ ನಲವತ್ತೈದು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದರೆ ಉಳಿದ 25 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.


ಬಸ್ಸು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಉಂಟಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್​ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮೆಟ್ರೋ ಪಿಲ್ಲರ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಕೆಎಸ್​ಆರ್​ಟಿಸಿ ಬಸ್​ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮಾಹಿತಿ ತಿಳಿಯುತ್ತದ್ದಂತೆಯೇ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ : SSLC Result : ಮೇ 20 ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಮೌಲ್ಯ ಮಾಪನಕ್ಕೆ ಗೈರಾದವರಿಗೆ ನೊಟೀಸ್

ಇದನ್ನೂ ಓದಿ :School Open Postpone : ಶಾಲೆ ಆರಂಭ ಮುಂದೂಡಿ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಭಾಪತಿ ಬಸವರಾಜ್‌ ಹೊರಟ್ಟಿ

KSRTC bus collides with Metro Pillar in Bengaluru

Comments are closed.