ಸುರತ್ಕಲ್‌ : ಕೆಎಸ್‌ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್‌ ಢಿಕ್ಕಿ 30 ಮಂದಿಗೆ ಗಂಭೀರ ಗಾಯ

ಸುರತ್ಕಲ್‌ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆದ (KSRTC Bus Private Bus Accident) ಪರಿಣಾಮವಾಗಿ 30 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿರುವ ದುರ್ಘಟನೆ ಸುರತ್ಕಲ್‌ ಮುಕ್ಕದಲ್ಲಿ ನಡೆದಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಳೆರಾಯನ ಆಗಮನದಿಂದಾಗಿ ಎರಡು ಬಸ್‌ಗಳು ಪ್ರಯಾನೀಕರನ್ನು ಹೊತ್ತು ಮಂಗಳೂರು ಕಡೆಗೆ ಸಾಗುತ್ತಿತ್ತು. ಅದೇ ವೇಳೆ ಖಾಸಗಿ ಬಸ್‌ ನಿಯಂತ್ರಣ ತಪ್ಪಿದ ಕಾರಣದಿಂದ ಎದುರುಗಡೆ ಸಾಗುತ್ತಿದ್ದ ಸರಕಾರಿ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ದುರ್ಘಟನೆಯಿಂದಾಗಿ ಎರಡು ಬಸ್‌ಗಳಲ್ಲಿದ್ದ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಶಿವಮೊಗ್ಗ ಬಸ್‌ ಅಪಘಾತದಲ್ಲಿ ಇಬ್ಬರು ಸಾವು : 30 ಕ್ಕೂ ಅಧಿಕ ಮಂದಿಗೆ ಗಾಯ

ಇನ್ನು ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಅಪಘಾತದಿಂದ ಗಾಯಗೊಂಡ ಗಾಯಳುಗಳನ್ನು ಸಂಬಂಧಪಟ್ಟವರಿಗೆ ಒಪ್ಪಿಸಿದ್ದಾರೆ.

Shivamogga BUS Accident : ಶಿವಮೊಗ್ಗದಲ್ಲಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ

ಶಿವಮೊಗ್ಗ : Shivamogga BUS Accident: ಎರಡು ಖಾಸಗಿ ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ 10 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಎಂಬಲ್ಲಿ ನಡೆದಿದೆ. ಅಪಘಾಯದಲ್ಲಿ ಬಸ್‌ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ತೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಹೊರವಲಯದ ಚೋರಡಿಯಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದ ವೇಳೆಯಲ್ಲಿ ಒಟ್ಟು 50 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಎಷ್ಟು ಮಂದಿ ಗಾಯಗೊಂಡಿದ್ದಾರೆ ಅನ್ನೋ ನಿಖರ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಕುಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ‌

KSRTC Bus Private Bus Accident: Suratkal: 30 people were seriously injured when a private bus collided with KSRTC bus.

Comments are closed.