ಪುತ್ತೂರು : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೊಲೆರೋ ವಾಹನ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬೊಲೆರೋ ಚಾಲಕ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆಯಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಕೆಟ್ಟಿನಿಂತಿದ್ದ ಲಾರಿಯ ಕೆಳಗೆ ದುರಸ್ಥಿಕಾರ್ಯದಲ್ಲಿ ನಿರತರಾಗಿದ್ದ ಮೂವರು ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ಠಾಣೆಯ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ : Udupi : ಪ್ರೇಯಸಿಗೆ ಚೂರಿ ಇರಿದು, ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
ಇದನ್ನೂ ಓದಿ : Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಪ್ಯೂ ಜಾರಿ
(Lorry and bolero Accident 3 death in Bedrodi Near Uppinagadi)