LPG Sylinder blast: ನೋಯ್ಡಾದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ: ನವಜಾತ ಶಿಶು ಸೇರಿದಂತೆ 2 ಮಕ್ಕಳು ಸಾವು

ನೋಯ್ಡಾ: (LPG Sylinder blast) ಏಕಾಏಕಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದು,ಸ್ಫೋಟದ ತೀವ್ರತೆಗೆ ನವಜಾತ ಶಿಶು ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನೋಯ್ಡಾದ ಸೆಕ್ಟರ್ 8 ರಲ್ಲಿನ ಕೊಳೆಗೇರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೂರು ಮಕ್ಕಳು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನೋಯ್ಡಾದ ಮೊದಲನೆಯ ಹಂತದಲ್ಲಿರುವ ಡಿ -221 ಸೆಕ್ಟರ್ 8 ಗುಡಿಸಲಿನಲ್ಲಿ ಏಕಾಏಕಿ ಎಲ್‌ ಪಿಜಿ ಸಿಲಿಂಡರ್‌ ಸ್ಫೋಟಗೊಂಡಿದ್ದು, ಕ್ಷಣದಲ್ಲೇ ಗುಡಿಸಲಿಗೆ ಬೆಂಕಿ ಆವರಿಸಿಕೊಂಡಿದೆ. ಕೂಡಲೇ ಬೆಂಕಿ ಅವಘಡದ ಬಗ್ಗೆ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಅಪಘಾತ ಸಂಭವಿಸಿದ ಸ್ವಲ್ಪ ಹೊತ್ತಿನಲ್ಲೇ ಬೆಂಕಿಯನ್ನು ಹತೋಟಿಗೆ ತರಲಾಯಿತು.

ಸ್ಥಳದಲ್ಲಿದ್ದ ಪೊಲೀಸ್ ತಂಡವು ಗಾಯಾಳುಗಳನ್ನು ಕೂಡಲೇ ನಿತಾರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮೃತರಲ್ಲಿ 12 ವರ್ಷದ ಮಗು ಮತ್ತು 12 ದಿನದ ನವಜಾತ ಹೆಣ್ಣು ಮಗು ಸಾವನ್ನಪ್ಪಿದೆ.

ಪ್ರಾಥಮಿಕ ತನಿಖೆ ವರದಿಯ ಪ್ರಕಾರ, ಗ್ಯಾಸ್ ಸಿಲಿಂಡರ್ ಸೋರಿಕೆಯೇ ಬೆಂಕಿಗೆ ಕಾರಣ ಎಂದು ತಿಳಿದುಬಂದಿದೆ. ಸದ್ಯ ಘಟನೆಯ ಕುರಿತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Terrorist arrested in bengaluru: ಬೆಂಗಳೂರಿನಲ್ಲಿ ಭಯೋತ್ಪಾದಕರ ನಂಟು ಹೊಂದಿರುವ ವ್ಯಕ್ತಿ ಬಂಧನ

ಇದನ್ನೂ ಓದಿ : Car bike accident: ಕೋಟಾದಲ್ಲಿ ಕಾರು-ಬೈಕ್‌ ಢಿಕ್ಕಿ: ನವವಿವಾಹಿತ ಸಾವು, ಇನ್ನೋರ್ವ ಗಂಭೀರ

ಇದನ್ನೂ ಓದಿ : Gujarath crime: 3 ತಿಂಗಳ ಭ್ರೂಣವನ್ನು ರಸ್ತೆಗೆ ಎಸೆದು ಪರಾರಿಯಾದ ಜೋಡಿ

LPG Cylinder blast: LPG cylinder blast in Noida: 2 children including a newborn died

Comments are closed.