Lucknow car accident: ಫ್ಲೈಓವರ್ ಮೇಲಿಂದ ಬಿದ್ದ ಕಾರು: 3 ಮಂದಿ ಸಾವು, ಓರ್ವನಿಗೆ ಗಾಯ

ಲಕ್ನೋ: (Lucknow car accident) ಚಲಿಸುತ್ತಿದ್ದ ಕಾರೊಂದು ಮೇಲ್ಸೇತುವೆಯಿಂದ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಪರಿಣಾಮ ಎಸ್‌ ಯುವಿ ಕಾರಿನ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲಿಟೆಕ್ನಿಕ್ ಮೇಲ್ಸೇತುವೆಯಿಂದ ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಎಸ್‌ಯುವಿ ಪಲ್ಟಿಯಾಗಿ ಶನಿವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ನಿನ್ನೆ ರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಮೇಲ್ಸೇತುವೆಯಿಂದ ಕಾರು ಕೆಳಗೆ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ಮೃತರಲ್ಲಿ ಒಬ್ಬನನ್ನು ಇಂದಿರಾನಗರ ಡಿ ಬ್ಲಾಕ್‌ನಲ್ಲಿರುವ ಒಲಂಪಿಯಾ ಜಿಮ್‌ನಲ್ಲಿ ತರಬೇತುದಾರ ಎಂದು ಗುರುತಿಸಲಾಗಿದೆ.ಮೃತರನ್ನು ಅಮಿತ್ ಕುಮಾರ್, ರಾಜಕುಮಾರ್ ಮತ್ತು ಪ್ರಿಯಾಂಶು ಶುಕ್ಲಾ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಹರ್ಷ್ ಶುಕ್ಲಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : Acid Attack On Minor Girl : ಪ್ರೇಮ ನಿವೇದನೆಯನ್ನು ನಿರಾಕರಿಸಿದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ದಾಳಿ

ಇದನ್ನೂ ಓದಿ : Uttar Pradesh Crime : ರಸಗುಲ್ಲಾ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ರಸಗುಲ್ಲಾ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಒಂದು ಬಕೆಟ್‌ ಪೂರ್ತಿ ರಸಗುಲ್ಲವನ್ನು ಕದ್ದುಕೊಂಡು ಹೋಗುತ್ತಿದ್ದಾಗ, ಅದನ್ನು ಕಂಡ ವರನ ಕಡೆಯವರು ವಧುವಿನ ಸಂಬಂಧಿಗೆ ಪ್ರಶ್ನಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಗುಂಪುಗಳಾಗಿ ಗಲಾಟೆ ಬೇರೆಯ ಸ್ಥಿತಿಗೆ ತಲುಪಿದ್ದು ಹೊಡೆದಾಡಿಕೊಂಡಿದ್ದಾರೆ. ವಧುವಿನ ಸಂಬಂಧಿ ಹರಿಯಾಣದ ಮೂಲದ 50 ವರ್ಷದ ರಣವೀರ್‌ ಸಿಂಗ್‌ ಮೃತ ವ್ಯಕ್ತಿ. ಈತನ ಮೇಲೆ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಲಾಗಿದೆ. ಇನ್ನೊಂದೆಡೆ ಈತನ ಸಹೋದರ ಸಂಬಂಧಿ ರಾಮ್‌ ಕಿಶೋರ್‌ ಮೇಲೆಯೂ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ವ್ಯಕ್ತಿಗಳನ್ನು ರಜತ್‌, ಅಜಯ್‌, ಸತ್ಯಭಾನ್‌ ಹಾಗೂ ಭರತ್‌ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಿಕಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಮ್‌ ಕಿಶೋರ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ : Bulgaria News : ಬಲ್ಗೇರಿಯಾದಲ್ಲಿ ಹಳ್ಳಕ್ಕೆ ತಳ್ಳಿದ ಟ್ರಕ್‌ನಲ್ಲಿ 18 ವಲಸಿಗರು ಶವವಾಗಿ ಪತ್ತೆ

ನಿನ್ನೆ ತಡರಾತ್ರಿ, ನಾಲ್ಕು ಜನರ ಗುಂಪು ಚಿನ್ಹಾಟ್‌ನಲ್ಲಿ ಮದುವೆ ಕಾರ್ಯಕ್ರಮದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಕಾರು ನಿಯಂತ್ರಣ ಕಳೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಘಟನೆಯ ಕುರಿತು ಗಾಜಿಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Lucknow car accident: Car falls from flyover: 3 dead, 1 injured

Comments are closed.