Luxury Car Fire : ಪ್ರಯಾಣಿಸುತ್ತಿದ್ದಾಗಲೇ ಹೊತ್ತಿ ಉರಿದ ಐಷಾರಾಮಿ ಕಾರು, ಇಬ್ಬರು ಪಾರು

ಮಹಾರಾಷ್ಟ್ರ: ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಐಷಾರಾಮಿ ಕಾರೊಂದು (Luxury Car Fire) ಹೊತ್ತಿ ಉರಿದಿದ್ದು, ಇಬ್ಬರು ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾನ್ಪಾಡಾ ಪ್ರದೇಶದಲ್ಲಿ ಬೆಳಿಗ್ಗೆ 7:15 ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡವೊಂದರ ಲಾಬಿ ಪ್ರದೇಶಕ್ಕೆ ಕಾರು ಬರುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ವಾಹನದಲ್ಲಿದ್ದವರು ಸಕಾಲದಲ್ಲಿ ಅದರಿಂದ ಹೊರಗೆ ನಡೆದಿದ್ದಾರೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ (ಆರ್‌ಡಿಎಂಸಿ) ಮುಖ್ಯಸ್ಥ ಯಾಸಿನ್ ತದ್ವಿ ಹೇಳಿದ್ದಾರೆ. ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಆರ್‌ಡಿಎಂಸಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಆ ಹೊತ್ತಿಗೆ ಕಾರು ಬೂದಿಯಾಯಿತು ಎಂದು ಹೇಳಿದರು. ಬೆಂಕಿಯ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇನ್ನೊಂದೆಡೆ ತಮಿಳುನಾಡಿನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಖಾಸಗಿ ಬೋಗಿಯಲ್ಲಿ ಅಗ್ನಿ ಅವಘಢ ಸಂಭವಿಸಿ, ಹತ್ತು ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದಲ್ಲಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಕುರಿತು ರೈಲ್ವೆ ಇಲಾಖೆ ಹಾಗೂ ಸ್ಥಳೀಯ ಜಿಲ್ಲಾಡಳಿತ ತನಿಖೆಯನ್ನು ನಡೆಯುತ್ತಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಅಗ್ನಿಶಾಮಕ ಸಿಬ್ಬಂದಿ, ರೈಲ್ವೆ ಪೊಲೀಸರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನೂ ಓದಿ : Delhi Mid-Day Meal : ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸೇವೆನೆ : 70ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ರೈಲಿನಲ್ಲಿ ಬೆಂಕಿ ಅವಘಡ : 9 ಮಂದಿ ಸಾವು, 20 ಮಂದಿಗೆ ಗಾಯ

ತಮಿಳುನಾಡು : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ರೈಲಿನಲ್ಲಿ (Tamil Nadu News) ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ಒಂಬತ್ತು ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಮಧುರೈ ರೈಲು ನಿಲ್ದಾಣದ ಬಳಿಯ ಬೋಡಿ ಲೇನ್‌ನಲ್ಲಿ ನಿಂತಿದ್ದ ಪ್ರವಾಸಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂಬತ್ತು ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಮೃತದೇಹಗಳನ್ನು ತಮಿಳುನಾಡಿನ ಮಧುರೈನ ಸರಕಾರಿ ರಾಜಾಜಿ ಆಸ್ಪತ್ರೆಗೆ ರವಾನಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ : Fire accident in train : ತಮಿಳುನಾಡು ರೈಲು ದುರಂತ : ಮೃತರ ಸಂಖ್ಯೆ 10ಕ್ಕೆ ಏರಿಕೆ : ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಪ್ರಯಾಣಿಕರೊಬ್ಬರು ಕಾಫಿ ಮಾಡಲು ಗ್ಯಾಸ್ ಸ್ಟೌವ್ ಹೊತ್ತಿಸಿದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ 5:30 ರ ಸುಮಾರಿಗೆ ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಲ್ಲಿ ಉತ್ತರ ಪ್ರದೇಶದಿಂದ ಬಂದ ಯಾತ್ರಾರ್ಥಿಗಳು ಇದ್ದರು. ಕಾಫಿ ಮಾಡಲು ಗ್ಯಾಸ್ ಸ್ಟವ್ ಹೊತ್ತಿಸಿದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸದ್ಯಕ್ಕೆ ನಾವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ಮಧುರೈ ಜಿಲ್ಲಾಧಿಕಾರಿ ಎಂಎಸ್ ಸಂಗೀತಾ ಹೇಳಿದ್ದಾರೆ.

A luxury car caught fire while traveling, two escaped

Comments are closed.