Maharashtra Gangrape:16 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್:‌ 8 ಮಂದಿ ಬಂಧನ

ಮಹಾರಾಷ್ಟ್ರ: (Maharashtra Gangrape) ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕಿಯ ಮೇಲೆ ಎಂಟು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ನಂತರದಲ್ಲಿ ಸಮುದ್ರ ತೀರಕ್ಕೆ ಕರೆದೊಯ್ದು ಲೈಂಗಿಕ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಸಮೀಪದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಆರೋಪಿಗಳು ಕಡಲತೀರದ ಹಳ್ಳಿಯಲ್ಲಿನ ನಿರ್ಜನ ಪ್ರದೇಶದ ಬಂಗಲೆಯೊಂದರಲ್ಲಿ ಅಪ್ರಾಪ್ತೆಯನ್ನು ಕರೆದೊಯ್ದು ಕ್ರೂರವಾಗಿ ಅತ್ಯಾಚಾರ (Maharashtra Gangrape) ನಡೆಸಿದ್ದಾರೆ. ನಂತರ ಬಾಲಕಿಯನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲಿ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಧ್ಯಮಗಳು ತಿಳಿಸಿವೆ.

ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ “ಮಾಹಿಮ್ ಗ್ರಾಮದ ಖಾಲಿ ಬಂಗಲೆಗೆ ಡಿಸೆಂಬರ್ 16 ರಂದು ತನ್ನನ್ನು ಕರೆದೋಯ್ದು, ರಾತ್ರಿ 8 ಗಂಟೆಯ ಸುಮಾರಿಗೆ 8 ಜನರು ಅತ್ಯಾಚಾರ ನಡೆಸಲು ಪ್ರಾರಂಭಿಸಿದ್ದಾರೆ. ಮರುದಿನ ಬೆಳಿಗ್ಗೆ 10 ಗಂಟೆಯವರೆಗೂ ಬಿಡದೆ ಅತ್ಯಾಚಾರ ನಡೆಸಿದ್ದಾರೆ. ನಂತರ ತನ್ನನ್ನು ಸಮುದ್ರ ತೀರದ ಪೊದೆಗಳಿಗೆ ಕರೆದೊಯ್ದು ಅಲ್ಲಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಅನ್ವಯ ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಿಸಿದ್ದು, ಅದರ ಆಧಾರದ ಮೇಲೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ಭಾರತೀಯ ದಂಡದ ಐಪಿಸಿ ಸೆಕ್ಷನ್ 323, 341, 342, 366 ಮತ್ತು 376 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 8 ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : Annual Sports Event : ಶಾಲೆಯ ವಾರ್ಷಿಕ ಕ್ರೀಡಾಕೂಟದ ವೇಳೆ ಬಾಲಕನ ಕತ್ತು ಸೀಳಿದ ಈಟಿ

ಇದನ್ನೂ ಓದಿ : Jharkhand crime: ಪತ್ನಿಯನ್ನು ಕೊಲೆಗೈದು ದೇಹವನ್ನು 12 ತುಂಡುಗಳಾಗಿ ಕತ್ತರಿಸಿದ ಪತಿ

ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

(Maharashtra Gangrape) A 16-year-old girl was gang-raped by eight people in a village and then taken to the beach and sexually assaulted near Palghar in Maharashtra.

Comments are closed.