Mandya News : ಈಜಲು ತೆರಳಿದ್ದ ರಾಷ್ಟೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಸಾವು

ಮಂಡ್ಯ : ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ನಾಲೆಗೆ ಈಜಲು ತೆರಳಿದ್ದ ವೇಳೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ(Mandya News) ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಬಾಳು ಎಂಬಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ‌ 17 ವರ್ಷದ ಆಲ್ಹರ್ಶ್ ಮೃತ ಕೀಡಾಪಟು. ಕ್ರೀಡಾಕೂಟದಲ್ಲಿ ಭಾಗಿಯಾಗಲು ಬಂದಿದ್ದ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯುವಜನ ಸಬಲೀಕರಣ ಮತ್ತು ಕೀಡಾ ಇಲಾಖೆ ವತಿಯಿಂದ ರಾಷ್ಟ್ರಮಟ್ಟದ ಸೈಕಲ್‌ ಪೋಲೋ ಕ್ರೀಡಾ ಕೂಟವನ್ನು ಮಂಡ್ಯದ ಕೆ.ಆರ್‌.ಪೇಟೆ ತಾಲೂಕಿನ ಅಕ್ಕಿಬೆಬ್ಬಾಳುನಲ್ಲಿ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ರಾಜ್ಯ, ಹೊರರಾಜ್ಯದಿಂದ ಸೈಕ್ಲಿಂಗ್‌ ಕ್ರೀಡಾಪಟುಗಳು ಆಗಮಿಸಿದ್ದರು. ಕ್ರೀಡಾಕೂಟ ಸ್ಥಳದಿಂದ ಸ್ವಲ್ಪ ದೂರದಲ್ಲಿ ನಾಲೆ ಇದ್ದು, ಕ್ರೀಡಾಪಟುಗಳು ಈಜಲು ತೆರಳಿದ್ದರು. ಈ ವೇಲೆಯಲ್ಲಿ ಪಾಂಡಿಚೇರಿಯ ಕ್ರೀಡಾಪಟು ಆಲ್ಹರ್ಶ್‌ ನೀರಿನಲ್ಲಿ ಈಜುವ ವೇಳೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ನಾಲೆಯಿಂದ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ಇದನ್ನೂ ಓದಿ : Crime News: ಪತಿಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಂದ ಪತ್ನಿ ಮತ್ತು ಪ್ರಿಯಕರ

ಇದನ್ನೂ ಓದಿ : Accident News : ಟ್ರ್ಯಾಕ್ಟರ್ ಲಾರಿ ಮುಖಾಮುಖಿ ಡಿಕ್ಕಿ : 5 ಮಂದಿ ಸಾವು, 25 ಮಂದಿ ಗಾಯ

ಇದನ್ನೂ ಓದಿ : Road Accident : ಹೊತ್ತಿ ಉರಿದ ಮುಂಬೈ – ಮಂಗಳೂರು ಖಾಸಗಿ ಬಸ್ : ತಪ್ಪಿದ ಬಾರೀ ದುರಂತ

ಕ್ರೀಡಾಕೂಟದ ವೇಳೆಯಲ್ಲಿ ಸರಿಯಾಗಿ ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸದಕ್ಕೆ ಕ್ರೀಡಾಪಟು ನಾಲೆಗೆ ತೆರಳಿದ್ದ. ಈ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಆರ್‌.ಪೇಟೆ ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Accident News : ಟ್ರ್ಯಾಕ್ಟರ್ ಲಾರಿ ಮುಖಾಮುಖಿ ಡಿಕ್ಕಿ : 5 ಮಂದಿ ಸಾವು, 25 ಮಂದಿ ಗಾಯ

ತೆಲಂಗಾಣ : ರಾಷ್ಟ್ರೀಯ ಹೆದ್ದಾರಿಯಲ್ಲಿ(Accident News) ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟ್‌ನ ಮುನಗಲಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುತ್ತದೆ. ಮುನಗಲ್ ಹೊರವಲಯದಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ತೆನ್ನೇರು ಪ್ರಮೀಳಾ (35), ಚಿಂತಕಾಯಲ ಪ್ರಮೀಳಾ (33), ಉದಯ ಲೋಕೇಶ್ (8), ನರಗೋಣಿ ಕೋಟಯ್ಯ (55) ಮತ್ತು ಗುಂಡು ಜ್ಯೋತಿ (38) ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಸುಮಾರು 30 ಜನರು ಪ್ರಯಾಣಿಸುತ್ತಿದ್ದಾಗ ವಾಹನವು ವಿರುದ್ಧ ಮಾರ್ಗದಲ್ಲಿ ಚಲಿಸಿದ ಪರಿಣಾಮವಾಗಿ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿತು. ಅದೇ ವೇಳೆ ವೇಗವಾಗಿ ವಿಜಯವಾಡ ಕಡೆಗೆ ಹೋಗುತ್ತಿದ್ದ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ 30 ಜನರು ವಾಹನದಿಂದ ರಸ್ತೆಗೆ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ರ್ಯಾಕ್ಟರ್‌ನ್ನು ಹಲವಾರು ಮೀಟರ್‌ಗಳವರೆಗೆ ಎಳೆದುಕೊಂಡು ಬಂದು ನಿಂತಿದ್ದ ಪರಿಣಾಮವಾಗಿ ಒಂದು ಮಗು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. 25ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಕುರಿತು ಮುನಗಲ್ ವೃತ್ತ ನಿರೀಕ್ಷಕ ಆಂಜನೇಯುಲು, ” ಮಧ್ಯರಾತ್ರಿ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು” ಎಂದು ತಿಳಿಸಿದ್ದಾರೆ. “ನಡೆದ ಘಟನೆಯಲ್ಲಿ ಒಂದು ಮಗು ಸೇರಿದಂತೆ ಐದು ಜನರು ತಮ್ಮ ಗಾಯಗಳಿಗೆ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಉಳಿದ 25 ಜನರಿಗೆ ಗಂಭೀರವಾದ ಗಾಯಗಳಾಗಿವೆ. ನಾವು ವಿಷಯವನ್ನು ತನಿಖೆ ಮಾಡುತ್ತಿದ್ದೇವೆ, ಅದು ಯಾರದು ಮತ್ತು ಅಪಘಾತ ಹೇಗೆ ಸಂಭವಿಸಿತು ಎಂದು ನೋಡುತ್ತಿದ್ದೇವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆ ಸ್ಥಳಾಂತರಿಸಲಾಗಿದೆ ” ಎಂದು ಸ್ಥಳಕ್ಕೆ ಆಗಮಿಸಿದ ಅಧಿಕಾರಿ ಹೇಳಿದರು. ಈ ಘಟನೆಯ ಕುರಿತು ಮುನಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.

Mandya News: A national level cycling athlete who had gone for swimming died

Comments are closed.