Mangalore Acid attack 3 Students : ಮಂಗಳೂರು : ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ (PUC EXAMS 2024) ಸಿದ್ದತೆ ನಡೆಸುತ್ತಿದ್ದ ವೇಳೆಯಲ್ಲಿ ದುಷ್ಕರ್ಮಿಯೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ (Acid Attack) ನಡೆದಿರುವ ಘಟನೆ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಕಡಬದಲ್ಲಿ (Kadaba) ನಡೆದಿದೆ.

ಕಡಬದ ಸರಕಾರಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ವೇಳೆಯಲ್ಲಿ ಸ್ಥಳಕ್ಕೆ ಮಾಸ್ಕ್ ಹಾಗೂ ಟೋಫಿಯನ್ನು ಧರಿಸಿಕೊಂಡು ಬಂದಿದ್ದ ದುಷ್ಕರ್ಮಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮೂವರು ವಿದ್ಯಾರ್ಥಿನಿಯರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ : ರಾಮೇಶ್ವರಂ ಕಫೆ ಸ್ಪೋಟ ಪ್ರಕರಣ : ತಾಯಿಯ ಒಂದು ಕರೆ ಮಗನ ಜೀವ ಉಳಿಸಿತು …!
ಘಟನೆಯ ಬೆನ್ನಲ್ಲೇ ಆಸಿಡ್ ದಾಳಿ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಆಬೀನ್ (23 ) ಎಂಬಾತನೇ ಆಸಿಡ್ ದಾಳಿ ಮಾಡಿರುವ ಆರೋಪಿ ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾಗಿರುವ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಯಾವ ಕಾರಣಕ್ಕೆ ಈತ ಆಸಿಡ್ ದಾಳಿ ನಡೆಸಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ : ಬ್ರಹ್ಮಾವರ : ಗುಂಡಿಕ್ಕಿ ಯುವಕ ಹತ್ಯೆ, ಆರೋಪಿಗಳು ಪರಾರಿ
ಕಡಬ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆಬೀನ್ ಯಾರು, ಆತ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಅನ್ನೋದು ಪೊಲೀಸರ ತನಿಖೆಯ ನಂತರವಷ್ಟೇ ತಿಳಿದು ಬರಬೇಕಾಗಿದೆ.
ಕಡಬ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ಆಸಿಡ್ ದಾಳಿಗೆ ಒಳಗಾಗಿರುವ ಮೂವರು ವಿದ್ಯಾರ್ಥಿನಿಯರು ಒಟ್ಟಿಗೆ ಕುಳಿತು ಪರೀಕ್ಷೆಗೆ ಓದಿಕೊಳ್ಳುತ್ತಿದ್ದರು. ಈ ವೇಳೆಯಲ್ಲಿಯೇ ಈ ದಾಳಿ ನಡೆದಿದೆ. ಘಟನೆಯ ಬೆನ್ನಲ್ಲೇ ಕಡಬದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರೇ ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Mobile Users Alert … ! ಈ ಸೆಟ್ಟಿಂಗ್ ಬದಲಾಯಿಸದೇ ಇದ್ರೆ ನಿಮ್ಮ ಮೊಬೈಲ್ ಹ್ಯಾಕ್ ಆಗೋದು ಪಕ್ಕಾ ..!
Mangalore: Acid attack on three PUC students in Kadaba Dakshin Kannada Admitted Mangalore Hospital