ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇಲ್ಲೋರ್ವ ಆರೋಪಿ ಎರಡು ವರ್ಷದ ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿ ನಂತರ ಫಿಶ್ ಕಟ್ ಮಾಡುವ ಟ್ಯಾಂಕ್‌ಗೆ ಎಸೆದು ಪರಾರಿಯಾಗಿರುವ ಘಟನೆ ಬಂದರು ನಗರಿ ಮಂಗಳೂರಲ್ಲಿ ನಡೆದಿದೆ.
ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಫಿಶ್ ಕಟ್ಟಿಂಗ್ ಫ್ಯಾಕ್ಟರಿ ಬಳಿಯಲ್ಲಿ ಬಿಹಾರ ಮೂಲಕದ ಕಾರ್ಮಿಕರು ವಾಸವಾಗಿದ್ದಾರೆ. ಕಾರ್ಮಿಕರ ಕ್ಯಾಂಪಿನಲ್ಲಿದ್ದ ಮಗುವನ್ನು ಚಂದನ್ ಎಂಬಾತ ಹೊತ್ತೊಯ್ದಿದ್ದಾನೆ. ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿ ನಂತರದ ಮಗುವನ್ನು ಪಿಶ್ ಕಟ್ಟಿಂಗ್ ಮಾಡುವ ಟ್ಯಾಂಕ್‌ಗೆ ಎಸೆದು ಪರಾರಿಯಾಗಿದ್ದಾನೆ.
ಫಿಶ್ ಕಟ್ಟಿಂಗ್ ಟ್ಯಾಂಕ್‌ನಲ್ಲಿ ತುಂಬಿದ್ದ ಉಪ್ಪು ನೀರಿನಲ್ಲಿ ಬಿದ್ದ ಮಗು ಸುಮಾರು ನಾಲ್ಕು ಗಂಟೆಗಳ ಕಾಲ ಜೀವನ್ಮರಣ ಹೋರಾಟವನ್ನು ನಡೆದಿದೆ. ಉಪ್ಪು ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಗುವನ್ನು ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಕುಡಿದ ಮತ್ತಲ್ಲಿ ದುಷ್ಕೃತ್ಯ , ಆರೋಪಿ ಸ್ನೇಹಿತ ಅರೆಸ್ಟ್
ಇದನ್ನೂ ಓದಿ : ಪ್ರೀತಿಗೆ ತಂದೆಯೇ ವಿಲನ್ ! ಮಗಳನ್ನು ಕೊಲೆಗೈದು ಶವ ಎಸೆದ ಅಪ್ಪ