ಮಂಗಳೂರು : ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಕಿನ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ರಾಜೇಶ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಆದ್ರೀಗ ರಾಜೇಶ್ ಭಟ್ ನಾಪತ್ತೆಯಾಗಿದ್ದು, ಆತ ತಲೆ ಮರೆಯಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ನೇಹಿತ ಅನಂತ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ತನ್ನ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿಗೆ ಲೈಂಕಿಗ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ರಾಜೇಶ್ ಭಟ್ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ. ಆದರೆ ರಾಜೇಶ್ ಭಟ್ ಪರಾರಿಯಾಗಲು ಮಂಗಳೂರಿನ ಬೊಂದೆಲ್ ನಿವಾಸಿಯಾಗಿರುವ ಅನಂತ ಭಟ್ ಸಹಕಾರ ನೀಡಿದ್ದರು.
ಅನಂತ ಭಟ್ ಆರೋಪಿ ರಾಜೇಶ್ ಭಟ್‌ನನ್ನು ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಪರಾರಿಯಾಗುವಂತೆ ಮಾಡಿದ್ದಾರೆ. ಇದೀಗ ಪೊಲೀಸರು ಅನಂತ್ ಭಟ್ ಅವರನ್ನು ಬಂಧಿಸಿದ್ದು, ಆರೋಪಿ ರಾಜೇಶ್ ಭಟ್ ಕಾರು ಹಾಗೂ ಮೊಬೈಲ್ ವಶಕ್ಕೆ ಪಡೆದು ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ : ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ : ಖ್ಯಾತ ವಕೀಲನ ವಿರುದ್ದ FIR
ಇದನ್ನೂ ಓದಿ : ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ವಕೀಲ ರಾಜೇಶ್ ಭಟ್ ಅಮಾನತ್ತು, ಮೂವರು ಅರೆಸ್ಟ್
( Internship Student Harassments Case Ananta Bhat arrested for co-operating with lawyer Rajesh Bhatt )