ಮಂಗಳೂರು : ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರವೆಸಗಿ, ನಗ್ನ ಪೋಟೋ ತೆಗೆದು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮುಕ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ರಾಯಚೂರು ಮೂಲದ ಗುರುರಾಜ್ ಎಂಬಾತನೇ ಬಂಧಿತ ಶಿಕ್ಷಕ. ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿ ಯನ್ನು ಮನೆಗೆ ಕರೆಯಿಸಿಕೊಂಡಿದ್ದಾನೆ. ಈ ವೇಳೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಆಕೆಯೊಂದಿಗಿರುವ ಏಕಾಂತದ ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾನೆ.
ನಂತರ ಪದೇ ಪದೇ ವಿದ್ಯಾರ್ಥಿನಿಗೆ ಪೋಟೋ ತೋರಿಸಿ ಹಣ ತರುವಂತೆ ಪೀಡಿಸಿದ್ದಾನೆ. ಅಷ್ಟೇ ಅಲ್ಲಾ ಕಾಮುಕ ಶಿಕ್ಷಕನ ಕಾರ್ಯಕ್ಕೆ ಪತ್ನಿ ಕೂಡ ಸಾಥ್ ನೀಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಶಿಕ್ಷಕ ಗುರುರಾಜ್ ಹಾಗೂ ಆತನ ಪತ್ನಿ ರಾಜೇಶ್ವರಿಯನ್ನು ಬಂಧಿಸಿದ್ದಾರೆ.
( Arrested teacher accused of blackmailing student )