ಮಂಗಳೂರು : (Mangaluru Fazil murder case) ಸುರತ್ಕಲ್‌ನ ಮಂಗಲಪೇಟೆಯಲ್ಲಿ ನಡೆದಿರುವ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 51 ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದು, 8 ಇಯೋನ್ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಸುದ್ದಿಗೋಷ್ಠಿಯನ್ನು ನಡೆಸಿ ಆರೋಪಿಗಳ ಬಂಧನದ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ 14 ಮಂದಿ ನಂತರದಲ್ಲಿ 21 ಮಂದಿ ಹಾಗೂ ಅಂತಿಮವಾಗಿ 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸಲಾಗಿದೆ. ಪ್ರಮುಖವಾಗಿ ಹತ್ಯೆ ನಡೆದಿರುವ ಪ್ರದೇಶದಲ್ಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಯಲ್ಲಿ ಬಿಳಿ ಬಣ್ಣದ ಇಯೋನ್ ಕಾರನ್ನು ಬಳಸಿರುವ ಕುರಿತು ಮಾಹಿತಿಯನ್ನು ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಂಶಯಾಸ್ಪದ ಇಯೋನ್ ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.
ಇನ್ನು ಹತ್ಯೆಗೆ ಬಳಿಸಿರುವ ಇಯೋನ್ ಕಾರ್ ಮಾಲೀಕನನ್ನು ನಿನ್ನೆ ಸುರತ್ಕಲ್ ಹೊರ ವಲಯದಲ್ಲಿ ವಶಕ್ಕೆ ಪಡೆಯಲಾಗಿದ್ದು, ಆತ ನೀಡಿರುವ ಮಾಹಿತಿಯ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಪೊಲೀಸರ ತಂಡ ಸಜ್ಜಾಗಿದೆ. ಇನ್ನು ಕಾರು ಚಾಲಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದು, ಮತ್ತೆ ಹೆಚ್ಚುವರಿ ವಿಚಾರಣೆಯ ಹಿನ್ನೆಲೆಯಲ್ಲಿ ಆತನನ್ನು ಮತ್ತೆ ವಶಕ್ಕೆ ಪಡೆಯಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್‌ನ ಮಂಗಲಪೇಟೆ ಎಂಬಲ್ಲಿ ಶುಕ್ರವಾರ ರಾತ್ರಿ ಬಟ್ಟೆ ಖರೀದಿಗೆ ಬಂದಿದ್ದ ವೇಳೆಯಲ್ಲಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಹಲ್ಲೆಯನ್ನು ನಡೆಸಿತ್ತು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರು ಕೂಡ ಫಾಜಿಲ್ ಬಾರದ ಲೋಕಕ್ಕೆ ಪಯಣಿಸಿದ್ದ. ಪ್ರಕರಣದ ಬೆನ್ನಲ್ಲೇ ಫಿಲ್ಡಿಗೆ ಇಳಿದಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರು. ಹತ್ಯೆ ನಡೆದಿರುವ ಪ್ರದೇಶದಲ್ಲಿ ಸಿಕ್ಕಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿರುವ ಮಾಹಿತಿಯನ್ನು ಆಧಿರಿಸಿ ತನಿಖೆಯನ್ನು ಕೈಗೊಂಡಿದ್ದರು.
ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕ್ರಮ
ಫಾಜಿಲ್ ಹತ್ಯೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಸಂಘರ್ಷವನ್ನು ಹುಟ್ಟು ಹಾಕುವ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗುತ್ತಿರುವುದು ಕಂಡು ಬಂದಿದೆ. ಯಾವುದೇ ಸಂಘಟನೆ ಅಥವಾ ವೈಯಕ್ತಿಕವಾಗಿ ಕೋಮು ಸಂಘರ್ಷಕ್ಕೆ ಧಕ್ಕೆ ತರುವಂತಹದ್ದು ಕಂಡು ಬಂದ್ರೆ ಅಂತವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ : Mangalore Night Curfew : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಪ್ಯೂ
ಇದನ್ನೂ ಓದಿ : Chariot Accident in Pudukkottai : ಬ್ರಹ್ಮರಥೋತ್ಸವದ ವೇಳೆ ಪಲ್ಟಿಯಾದ ರಥ : 7 ಮಂದಿ ಆಸ್ಪತ್ರೆಗೆ ದಾಖಲು
Mangaluru Fazil murder case, five accused arrested? 8 cars seized