ಜನನಿಬಿಡ ರಸ್ತೆಯಲ್ಲಿ ಮಹಿಳೆಯ ಮೇಲೆ ವ್ಯಕ್ತಿಯಿಂದ ಹಲ್ಲೆ : ವಿಡಿಯೋ ವೈರಲ್

ನವದೆಹಲಿ : ಮಂಗೋಲ್‌ಪುರಿ ಮೇಲ್ಸೇತುವೆ ಬಳಿ ವ್ಯಕ್ತಿಯೊಬ್ಬ ಮಹಿಳೆಯನ್ನು ಥಳಿಸಿ ಬಲವಂತವಾಗಿ ಕಾರಿನಲ್ಲಿ ಕೂರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Mangolpuri Crime Case) ವೈರಲ್‌ ಆಗಿದೆ. ವೀಡಿಯೊದಲ್ಲಿ ಇಬ್ಬರು ವ್ಯಕ್ತಿಗಳು ಹುಡುಗಿಯನ್ನು ಎಳೆದುಕೊಂಡು ತಮ್ಮ ಕಾರಿಗೆ ತಳ್ಳುತ್ತಿರುವುದನ್ನು ಕಾಣಬಹುದು. ಕಾರು ಹರಿಯಾಣ ನಂಬರ್ ಪ್ಲೇಟ್ ಹೊಂದಿದ್ದು, ಖಾಸಗಿ ಕ್ಯಾಬ್ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಕಾರನ್ನು ಗುರುಗ್ರಾಮ್‌ನ ರತನ್ ವಿಹಾರ್‌ನಲ್ಲಿ ನೋಂದಾಯಿಸಲಾಗಿದ್ದು, ವಿಚಾರಣೆಗಾಗಿ ಅಲ್ಲಿಗೆ ಸಿಬ್ಬಂದಿಯ ತಂಡವನ್ನು ಕಳುಹಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಾಲಕ ಮತ್ತು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಶನಿವಾರ ರಾತ್ರಿ ವಿಡಿಯೋ ತಮ್ಮ ಗಮನಕ್ಕೆ ಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೊರ ಜಿಲ್ಲೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಹರೇಂದರ್ ಕುಮಾರ್ ಸಿಂಗ್ ಹೇಳಿದ್ದಾರೆ. ವಾಹನ ಮತ್ತು ಚಾಲಕನನ್ನು ಪತ್ತೆ ಮಾಡಲಾಗಿದೆ ಎಂದು ಅವರು ಹೇಳಿದರು. ರೋಹಿಣಿಯಿಂದ ವಿಕಾಸಪುರಿಗೆ ಉಬರ್ ಮೂಲಕ ಇಬ್ಬರು ಹುಡುಗರು ಮತ್ತು ಒಬ್ಬ ಹುಡುಗಿಗೆ ಕಾರ್‌ನ್ನು ಬುಕ್ ಮಾಡಲಾಗಿದೆ.

ಇದನ್ನೂ ಓದಿ : ಈಕ್ವೆಡಾರ್‌ನಲ್ಲಿ ಭೂಕಂಪ 15 ಮಂದಿ ಸಾವು : ಸ್ಥಳಕ್ಕೆ ಧಾವಿಸಿದ ರಕ್ಷಣಾಪಡೆ

ಇದನ್ನೂ ಓದಿ : Bus overturned: ಪುಲ್ವಾಮಾದಲ್ಲಿ ಬಸ್ ಪಲ್ಟಿ: 4 ಸಾವು, 28 ಮಂದಿಗೆ ಗಾಯ

“ದಾರಿಯಲ್ಲಿ ಅವರ ನಡುವೆ ವಾಗ್ವಾದ ಮತ್ತು ಗಲಾಟೆ ನಡೆಯಿತು. ಹುಡುಗ ಹುಡುಗಿಯನ್ನು ಬಲವಂತವಾಗಿ ಕಾರಿನೊಳಗೆ ತಳ್ಳುತ್ತಿರುವ ದೃಶ್ಯ ವಿಡಿಯೋದಲ್ಲಿ ನೋಡಬಹುದು. ಜಗಳದ ನಂತರ ಹುಡುಗಿ ಹೊರಗೆ ಹೋಗಲು ಬಯಸಿದ್ದಾಳೆ. ಹೀಗಾಗಿ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಕ್ಯಾಬ್ ಮಾಲೀಕರನ್ನು ಗುರುಗ್ರಾಮ್ ನಿವಾಸಿ ಎಂದು ಗುರುತಿಸಲಾಗಿದ್ದು, ತಂಡವನ್ನು ಅಲ್ಲಿಗೆ ಕಳುಹಿಸಲಾಗಿದೆ. ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : Truck-Car accident: ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: 3 ಮಂದಿ ಸ್ಥಳದಲ್ಲೇ ಸಾವು

Mangolpuri Crime Case : Woman assaulted by man on busy road : Video goes viral

Comments are closed.