ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರನ ಕಾರು ಚಾಲಕನ ಮೇಲೆ ಚಾಕು ಇರಿತವಾಗಿರುವಂತಹ ಘಟನೆಯು ಬೆಳಗಾವಿ ನಗರದ ಕ್ಲಬ್​ ರಸ್ತೆಯಲ್ಲಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್​ (32) ಎಂಬವರ ಮೇಲೆ ಚಾಕು ಇರಿತವಾಗಿದೆ.
ಚಾಕು ಇರಿತಕ್ಕೆ ಒಳಗಾಗಿರುವ ಬಸವಂತ ಕಡೋಲ್ಕರ್​​ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಹೆಬ್ಬಾಳ್ಕರ್​ ಅವರ ಕಾರು ಚಾಲಕ ಎನ್ನಲಾಗಿದೆ. ಬಸವಂತ ಕಾರು ನಿಲ್ಲಿಸಿ ಕಾರಿನಿಂದ ಕೆಳಗಿಳಿದ ಸಂದರ್ಭದಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಬಸವಂತ ಎದೆ, ಭುಜ, ತೊಡೆ ಸೇರಿದಂತೆ ನಾಲ್ಕು ಕಡೆಗಳಲ್ಲಿ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: ಯಲ್ಲಾಪುರ ರಂಜಿತಾ ಹತ್ಯೆ ಪ್ರಕರಣ: ಕಾಡಿನಲ್ಲಿ ಆರೋಪಿ ರಫೀಕ್ ಶವ ಪತ್ತೆ, ಆತ್ಮಹತ್ಯೆ ಶಂಕೆ

ಗಾಯಗೊಂಡಿರುವ ಬಸವಂತರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್​ ಹೆಬ್ಬಾಳ್ಕರ್ ಕೂಡ ಆಗಮಿಸಿ ಬಸವಂತರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಕ್ಯಾಂಪ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಈ ಕೃತ್ಯದ ಹಿಂದಿನ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories