ರಾಜಸ್ಥಾನ: ಜೋಧಪುರದಲ್ಲಿ 12 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರಎಸಗಿದ್ದು, ಬಾಲಕಿ ಗರ್ಭೀಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
12 ವರ್ಷದ ಬಾಲಕಿ ಕೆಲ ತಿಂಗಳುಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿ ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಆತಂಕ ಕ್ಕೊಳಗಾದ ಪೋಷಕರು ಬಾಲಕಿ ನೀಡಿದ ಮಾಹಿತಿ ಆಧರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಲೆಸಾರ್ ಉಪ ವಿಭಾಗ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈಗ 12 ವರ್ಷದ ಬಾಲಕಿ ಗಂಡುಮಗುವಿಗೆ ಜನ್ಮನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ರಾಜಸ್ಥಾನ ಮಕ್ಕಳ ಕಲ್ಯಾಣ ಸಮಿತಿ ಹೇಳಿದೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಕ್ಕಳನ್ನು ಬಂಧಿಸಲಾಗಿದ್ದು, ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಅಪ್ರಾಪ್ತ ಮಕ್ಕಳ ಕೃತ್ಯಕ್ಕೇ ಜೋಧಪುರವೇ ಬೆಚ್ಚಿ ಬಿದ್ದಿದೆ.