Mother killed her children: ತನ್ನ ಎರಡು ಮಕ್ಕಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಔರಂಗಾಬಾದ್: (Mother killed her children) 22 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನ ಸಾದತ್‌ನಗರ ಪ್ರದೇಶದಲ್ಲಿ ನಡೆದಿದೆ. ಇದೀಗ ತನ್ನ ಮಕ್ಕಳನ್ನು ಕೊಂದ ಕ್ರೂರ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್ ಸಾದತ್‌ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಮಹಿಳೆ ತನ್ನ ಆರು ವರ್ಷದ ಮಗಳು ಮತ್ತು ನಾಲ್ಕು ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಮಕ್ಕಳನ್ನು ಕೊಂದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಆ ಮಹಿಳೆ ಈ ಕೃತ್ಯವೆಸಗಲು ಹಿಂದಿರುವ ನೈಜ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ರಾತ್ರಿ ಮಲಗಿದ್ದ ಮಕ್ಕಳು ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ನಂತರ ಮಹಿಳೆ ಸ್ವತಃ ತನ್ನ ಕುಟುಂಬದವರನ್ನು ಕರೆದಿದ್ದಾಳೆ. ಕೋಣೆಯಲ್ಲಿ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದು, ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಮಕ್ಕಳು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಪ್ರಾಥಮಿಕ ಶವಪರೀಕ್ಷೆ ವರದಿಯ ಪ್ರಕಾರ, ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ತನ್ನ ಸ್ವಂತ ಮಕ್ಕಳನ್ನು ಕೊಲೆಗೈದ ಮಹಿಳೆಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಳ್ತಂಗಡಿ ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸರ ದಾಳಿ

ದೆಹಲಿ ಡಿಟಿಸಿ ಬಸ್‌ಗೆ ಬೆಂಕಿ: ಸಂಪೂರ್ಣ ಸುಟ್ಟು ಕರಕಲಾದ ಬಸ್‌

ಕಂಝಾವಾಲಾ: ದೆಹಲಿಯ ಕಂಝವಾಲಾ ಪ್ರದೇಶದಲ್ಲಿ ಡಿಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಾಹಿತಿಗಳ ಪ್ರಕಾರ ಘಟನೆಯಲ್ಲಿ ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.

ಹಳೆ ದೆಹಲಿ ರೈಲು ನಿಲ್ದಾಣದಿಂದ ಕುತುಬ್ ಘರ್‌ಗೆ ಚಲಿಸುವ ಡಿಟಿಸಿ ಬಸ್‌ನಲ್ಲಿ ಲಾಡ್‌ಪುರ ಬಸ್ ನಿಲ್ದಾಣದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್‌ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಇದನ್ನೂ ಓದಿ : Jewelery staff murder case: ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ: ಹಂತಕನ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

ಇದನ್ನೂ ಓದಿ : Turkey Earthquake: ಭೂಕಂಪಕ್ಕೆ ತತ್ತರಿಸಿದ ಟರ್ಕಿ: ಕಳೆದ 24 ಗಂಟೆಯಲ್ಲಿ ನಾಲ್ಕನೇ ಬಾರಿ 5.6 ತೀವ್ರತೆಯ ಭೂಕಂಪ

Mother killed her children: Sinful mother who strangled her two children

Comments are closed.