ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಹುಳ್ಳೇನಹಳ್ಳಿಯಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ಮಾಳೆ ಗ್ರಾಮದ ಸಿಂಚನಾ ( ೨೮ ವರ್ಷ) ಮಕ್ಕಳಾದ ಮಹೇಂದ್ರ (೬ ವರ್ಷ), ಡಿಂಪನಾ ( ೩ ವರ್ಷ) ಎಂಬವರೇ ಮೃತ ದುರ್ದೈವಿಗಳು. ಸಿಂಚನಾ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಅಜ್ಜಿಯ ಮನೆಗೆ ಬಂದಿದ್ದಳು. ಆದರೆ ಮಧ್ಯಾಹ್ನದ ವೇಳೆಯಲ್ಲಿ ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೆರೆಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
ಮೇಲ್ನೋಟಕ್ಕೆ ಕೌಟುಂಬಿಕ ಕಲಹವೇ ಆತ್ಮಹತ್ಯೆ ಕಾರಣವೆನ್ನಲಾಗುತ್ತಿದೆ. ಪೊಲೀಸರು ಈ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ. ಇತ್ತ ಕುಟುಂಬಿಕ ಆಕ್ರಂದನ ಮುಗಿಲು ಮುಟ್ಟಿದೆ.